ಅಂಬೇಡ್ಕರ್ ಬದುಕಿನ ಅಧ್ಯಯನ ಅಗತ್ಯ

gan-17
Published on

ಗಂಗೊಳ್ಳಿ: ಅಂಬೇಡ್ಕರ್ ಬದುಕು ಹೋರಾಟ ಮತ್ತು ಸಾಧನೆ ಜಗತ್ತಿನ ಪ್ರತಿಯೊಬ್ಬರಿಗೂ ಪ್ರೇರಣೆ ನೀಡುವಂಥದ್ದು. ಈ ನಿಟ್ಟಿನಲ್ಲಿ ಅವರ ಬದುಕನ್ನು ಪ್ರತಿಯೊಬ್ಬರು ಅಧ್ಯಯನ ಮಾಡುವ ಅಗತ್ಯವಿದೆ ಎಂದು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು.

ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರು ಯುವ ಕೇಂದ್ರ ಉಡುಪಿ, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲ, ಅಮೃತ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ಮೇಲ್‌ಗಂಗೊಳ್ಳಿಯ ಡಾ.ಅಂಬೇಡ್ಕರ್ ಸಭಾಭವನದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಸದಸ್ಯೆ ಅಕ್ಕಮ್ಮ ಅಧ್ಯಕ್ಷತೆ ವಹಿಸಿದ್ದರು. ಮೇಲ್‌ಗಂಗೊಳ್ಳಿಯ ಶ್ರೀ ಬಸವೇಶ್ವರ ದೇವಸ್ಥಾನ ಅಧ್ಯಕ್ಷ ಜಯಪ್ರಕಾಶ್ ಧ್ವಜಾರೋಹಣ ನೆರವೇರಿಸಿದರು. ಮೇಲ್‌ಗಂಗೊಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಗುರುರಾಜ್ ಆಚಾರ್ಯ ಶುಭ ಹಾರೈಸಿದರು. ಅಮೃತ ಯುವತಿ ಮಂಡಲ ಅಧ್ಯಕ್ಷೆ ಸಹನಾ ಸಂವಿಧಾನ ಪೀಠಿಕೆ ವಾಚಿಸಿದರು. ಯುವಕ ಮಂಡಲ ಅಧ್ಯಕ್ಷ ನಾಗೇಶ್, ಅರ್ಚನಾ ಮಹಿಳಾ ಮಂಡಳಿ ಅಧ್ಯಕ್ಷೆ ಜ್ಯೋತಿ ಮೊದಲಾದವರು ಉಪಸ್ಥಿತರಿದ್ದರು. ಯುವಕ ಮಂಡಲ ಗೌರವಾಧ್ಯಕ್ಷ ಭಾಸ್ಕರ ಎಚ್.ಜಿ. ಸ್ವಾಗತಿಸಿ, ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net