ಬೆಳ್ಳಿ ಪಲ್ಲಕ್ಕಿಯಲ್ಲಿ ಅಂಬೇಡ್ಕರ್ ಭಾವ ಚಿತ್ರ ಮೆರವಣಿಗೆ

ಬೆಳ್ಳಿ ಪಲ್ಲಕ್ಕಿಯಲ್ಲಿ ಅಂಬೇಡ್ಕರ್ ಭಾವ ಚಿತ್ರ ಮೆರವಣಿಗೆ
Published on

ತಿ.ನರಸೀಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ಸೋಮವಾರ ರಾತ್ರಿ ವಿಜೃಂಭಣೆಯಿಂದ ಆಚರಿಸಲಾಯಿತು.

ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಅವರ ಚರಿತ್ರೆಯ ಪುಸ್ತಕಗಳನ್ನ ಮನೆ ಮನೆಗೆ ವಿತರಿಸಲಾಯಿತು. ಅಂಬೇಡ್ಕರ್ ಭಾವಚಿತ್ರವುಳ್ಳ ಬಾವುಟವನ್ನು ಮನೆಗಳಿಗೆ ಕಟ್ಟುವ ಮೂಲಕ ವಿಶೇಷವಾಗಿ ಜಯಂತಿಯನ್ನು ಆಚರಿಸಲಾಯಿತು, ಜಯಂತಿ ಹಿನ್ನೆಲೆ ಗ್ರಾಮದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಮನೆಗಳ ಮುಂದೆ ಹಸಿರು ತೋರಣ ಹಾಗೂ ರಂಗೋಲಿ, ದೀಪಗಳಿಂದ ಅಲಂಕರಿಸಲಾಗಿತ್ತು. ಭಾವಚಿತ್ರಕ್ಕೆ ಮೇಣದಬತ್ತಿ ಹಚ್ಚಿ ಪೂಜಿಸಲಾಯಿತು. ಗ್ರಾಮದ ಜನರಿಗೆ ದಾಸೋಹದ ವ್ಯವಸ್ಥೆ ಮಾಡಲಾಯಿತು.

ವಿವಿಧ ಹೂಗಳಿಂದ ಸಿಂಗರಿಸಿ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಬೆಳ್ಳಿ ಪಲ್ಲಕ್ಕಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಾದ್ಯದ ಮೂಲಕ ಮೆರವಣಿಗೆ ಮಾಡಲಾಯಿತು.

ಗ್ರಾಮದ ಯಜಮಾನರು, ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net