

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಾಮಾಜಿಕ ಪ್ರಜ್ಞೆ ಇಂದಿಗೂ ಪ್ರಸ್ತುತವಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕ ಪ್ರೊ.ರಹಮತ್ ತರೀಕೆರೆ ಹೇಳಿದರು.
ಮಾನಸ ಗಂಗೋತ್ರಿಯ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣಾ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಡಾ.ಅಂಬೇಡ್ಕರ್ ಅವರ ಸಾಮಾಜಿಕ ಪ್ರಜ್ಞೆ’ ವಿಷಯ ಕುರಿತು ಉಪನ್ಯಾಸ ನೀಡಿ, ಸಮಾಜದಲ್ಲಿರುವ ಧೋರಣೆಗಳನ್ನು ಹೋಗಲಾಡಿಸಲು ಅಂಬೇಡ್ಕರ್ ಅವರ ಸಾಮಾಜಿಕ ಪ್ರಜ್ಞೆ ಎಲ್ಲರೂ ತಿಳಿಯಬೇಕಾಗಿದೆ ಎಂದರು.
ಬಸವಣ್ಣ, ಅಂಬೇಡ್ಕರ್, ಕುವೆಂಪು ಹೀಗೆ ದೇಶದಲ್ಲಿ ಜನ್ಮ ತಾಳಿದ ಮಹಾನ್ ವ್ಯಕ್ತಿಗಳ ಸಾಮಾಜಿಕ ಪ್ರಜ್ಞೆಯ ಸ್ವರೂಪಕ್ಕೆ ತನ್ನದೇ ಶಕ್ತಿ ಇತ್ತು. ಅಂಬೇಡ್ಕರರು ಹುಟ್ಟುಹಾಕಿದ ‘ಮೂಕನಾಯಕ’ ಪತ್ರಿಕೆಯಲ್ಲಿ ಸಾಮಾಜಿಕ ಪ್ರಜ್ಞೆ ವಿಷಯಧಾರಿತ ಲೇಖನಗಳ ಪ್ರಕಟವಾಗುತ್ತಿದ್ದವು. 12ನೇ ಶತಮಾನದಲ್ಲಿ ಬಸವಣ್ಣನವರು ಮಾಡಿದ ಸಾಮಾಜಿಕ ಕ್ರಾಂತಿಯೂ ಸಾಮಾಜಿಕ ಪ್ರಜ್ಞೆಯಾಗಿತ್ತು ಎಂದರು.
ಜಾತಿ ವ್ಯವಸ್ಥೆ ಸಂಪೂರ್ಣ ನಿರ್ಮೂಲನೆ, ಎಲ್ಲ ರಂಗದಲ್ಲೂ ಸವಾನತೆಂುನ್ನು ತರುವುದು ಅಂಬೇಡ್ಕರ್ ಅವರ ಸಾಮಾಜಿಕ ಪ್ರಜ್ಞೆಯಾಗಿತ್ತು. ಕುವೆಂಪು ಸಹ ಜಾತಿ ಮತ್ತು ಮತದ ವಿರುದ್ಧ ಹೋರಾಟ ಮಾಡಿದರು ಎಂದು ತಿಳಿಸಿದರು.