ದುರ್ಬಲ ವರ್ಗಗಳ ಏಳಿಗೆಗೆ ಶ್ರಮಿಸಿದ ಅಂಬೇಂಡರ್​

Ambender worked hard for the upliftment of the weaker sections
ವಿಜಯಪುರದ ಎ.ಎಸ್​. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಡಾ. ಬಿ.ಆರ್​. ಅಂಬೇಡ್ಕರ್​ ಅವರ ಸಾಧನೆಗಳ ಕುರಿತು ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಸಂತೊಷ ಭೋವಿ, ಡಾ. ಮಾಧವ ಗುಡಿ ಮತ್ತಿತರರಿದ್ದಾರೆ.
Published on

ವಿಜಯಪುರ: ಅಪಾರ ಪಾಂಡಿತ್ಯ ಹಾಗೂ ಬಹುಮುಖ ವ್ಯಕ್ತಿತ್ವ ಹೊಂದಿದ್ದ ಡಾ. ಬಿ.ಆರ್​. ಅಂಬೇಡ್ಕರ್​ ಅವರು, ರೈತರು, ಮಹಿಳೆಯರು, ಕಾರ್ಮಿಕರು ಹಾಗೂ ದುರ್ಬಲ ವರ್ಗಗಳ ಏಳಿಗೆಗೆ ನಿರಂತರ ಹೋರಾಟ ನಡೆಸುವ ಮೂಲಕ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ದೊರಕಿಸಲು ಶ್ರಮಿಸಿದರು ಎಂದು ಉಪನ್ಯಾಸಕ ಡಾ. ಮಾಧವ ಗುಡಿ ಹೇಳಿದರು.

ನಗರದ ಎ.ಎಸ್​. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸತಿ ಇಲಾಖೆ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಡಾ. ಅಂಬೇಡ್ಕರ್​ ಓದು ಎಂಬ ಡಾ. ಬಿ.ಆರ್​. ಅಂಬೇಡ್ಕರ್​ ಅವರ ಬದುಕು ಮತ್ತು ಸಾಧನೆಗಳ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಾಚಾರ್ಯ ಬಿ.ಎಸ್​. ಬೆಳಗಲಿ ಅಧ್ಯಕ್ಷತೆ ವಹಿಸಿದ್ದರು.

ಡಾ. ಬಿ.ಆರ್​. ಅಂಬೇಡ್ಕರ್​ ಅವರ ಸಾಧನೆಗಳ ಕುರಿತು ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಸಂತೊಷ ಭೋವಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರುತಿ ಮೇಲಿನಮನಿ ಸುಗಮ ಸಂಗೀತ ಪ್ರಸ್ತುತಪಡಿಸಿದರು. ಡಾ. ಸುಭಾಶಚಂದ್ರ ಕನ್ನೂರ ನಿರೂಪಿಸಿದರು. ಶರಣಗೌಡ ಪಾಟೀಲ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net