ಕೆಎಂಎಫ್ ಸಂಸ್ಥೆಗೆ ವಿದ್ಯಾರ್ಥಿಗಳ ಭೇಟಿ

PTR_17 OCT_1
Published on


ಪುತ್ತೂರು: ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಮಂಗಳೂರಿನ ಕೆ.ಎಂ.ಎಫ್ ಸಂಸ್ಥೆಗೆ ಬುಧವಾರ ಭೇಟಿ ನೀಡಲಾಯಿತು.


ಕೆ.ಎಂ.ಎಫ್ ಉದ್ಯೋಗಿ ಭಾವನಾ ಹಾಲು ಸಂಗ್ರಹಣೆ, ಪ್ಯಾಕೇಜಿಂಗ್, ವಿತರಣೆಯ ಬಗ್ಗೆ ಮಾಹಿತಿ ನೀಡಿದರಲ್ಲದೆ ಕೆ.ಎಂ.ಎಫ್ ಹಾಲಿನ ವಿವಿಧ ಮೌಲ್ಯವಽತ ಉತ್ಪನ್ನಗಳ ತಯಾರಿಕೆಯ ಬಗ್ಗೆ ತಿಳಿಸಿಕೊಟ್ಟರು. ಕೆ.ಎಂ.ಎಫ್ ಉದ್ಯೋಗಿ ಆದರ್ಶ ಸಹಕರಿಸಿದರು.


ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ, ವಾಣಿಜ್ಯ ವಿಭಾಗ ಮುಖ್ಯಸ್ಥೆ ಅನನ್ಯಾ ವಿ, ಉಪನ್ಯಾಸಕಿ ಶ್ರೀಕೀರ್ತನಾ, ಕನ್ನಡ ವಿಭಾಗ ಮುಖ್ಯಸ್ಥೆ ಜಯಂತಿ ಪಿ, ಪತ್ರಿಕೋದ್ಯಮ ಉಪನ್ಯಾಸಕ ಹರ್ಷಿತ್ ಪಿಂಡಿವನ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net