ಯುವಕರ ಭವಿಷ್ಯಕ್ಕಾಗಿ ಮಹತ್ವಾಕಾಂಕ್ಷಿ ಯೋಜನೆಗಳು

mp raghavedra self with public
ಭದ್ರಾವತಿ ತಾಲೂಕು ಬಿಳಕಿ ತಾಂಡ ಮಜ್ಜಿಗೇನಹಳ್ಳಿ ಗ್ರಾಮಸ್ಥರೊಂದಿಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಸೆಲ್ಫಿ ಪಡೆದರು.
Published on

ಶಿವಮೊಗ್ಗ: ಕೇಂದ್ರ ಸರ್ಕಾರ ಎಲ್ಲ ವರ್ಗಗಳ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ಕಳೆದ 10 ವರ್ಷಗಳಲ್ಲಿ ಜಾರಿಗೆ ತಂದಿದೆ. ಸಾಕಷ್ಟು ಯೋಜನೆಗಳು ನಿಮಗಾಗಿ ಕಾದಿದ್ದು, ಅವುಗಳ ಅನುಷ್ಟಾನಕ್ಕಾಗಿ ಈ ಬಾರಿ ಬಿಜೆಪಿಯನ್ನು ಬೆಂಬಲಿಸುವಂತೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.

ಭದ್ರಾವತಿ ತಾಲೂಕು ಬಿಳಕಿ ತಾಂಡ ಮಜ್ಜಿಗೇನಹಳ್ಳಿ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ, ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಮಹಾತ್ವಾಕಾಂಕ್ಷಿ ಯೋಜನೆಗಳ ಪಟ್ಟಿಗಳನ್ನು ಹಾಗೂ ತಮ್ಮ ಅವಧಿಯಲ್ಲಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡಿರುವ ಯೋಜನೆಗಳ ಕರ ಪತ್ರವನ್ನು ಮತದಾರರಿಗೆ ನೀಡಿ ಮಾತನಾಡಿದ ಅವರು, ಎಲ್ಲ ವರ್ಗದ ಜನರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವ ಸಮುದಾಯವನ್ನು ವಿಶೇಷವಾಗಿ ಗಮನಿಸಿದ ರಾಘವೇಂದ್ರ, ಯುವ ಸಮುದಾಯಕ್ಕೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೇ ಅದರ ಮೂಲಕ ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಂಡು ಕಮಲದ ಗುರುತಿಗೆ ಮತ ನೀಡುವಂತೆ ಮನವಿ ಮಾಡಿದರು.
ಬಿಳಕಿ ಶ್ರೀಗಳ ಆಶೀರ್ವಾದ: ಭದ್ರಾವತಿಯ ಬಿಳಕಿ ಹಿರೇಮಠಕ್ಕೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಭೇಟಿ ನೀಡಿ ರಾಚೋಟೇಶ್ವರ ಸ್ವಾಮೀಜಿಯಿಂದ ಆಶೀರ್ವಾದ ಪಡೆದರು. ಇದೇ ವೇಳೆ ಪ್ರಸ್ತುತ ರಾಜಕೀಯದ ಬಗ್ಗೆ ಕೆಲಸಮಯ ಚರ್ಚೆ ನಡೆಸಿದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಪ್ರಶಾಂತ್ ಕುಕ್ಕೆ, ಭದ್ರಾವತಿ ಬಿಜೆಪಿ ಮುಖಂಡ ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ರಾಹುಲ್ ಬಿದರೆ, ಕೂಡ್ಲಿಗೆರೆ ಹಾಲೇಶಪ್ಪ, ರಾಜು ತಲ್ಲೂರು, ಆನಂದ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net