ವೇಗವಾಗಿ ಹೋಗುತ್ತಿದ್ದ ಆ್ಯಂಬುಲೆನ್ಸ್ ಅಪಘಾತ, ಚಾಲಕ ಸ್ಥಳದಲ್ಲೇ ಸಾವು; ಬೆಂಗಳೂರಿನ ಆ್ಯಂಬುಲೆನ್ಸ್, ವಿಜಯಪುರದಲ್ಲಿ ಆ್ಯಕ್ಸಿಡೆಂಟ್​

Ambulance F
Published on

ವಿಜಯಪುರ: ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿರುವ ಆ್ಯಂಬುಲೆನ್ಸ್ ವಿಜಯಪುರದಲ್ಲಿ ಅಪಘಾತಕ್ಕೀಡಾಗಿದ್ದು, ಆ್ಯಂಬುಲೆನ್ಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರ ಹೊರವಲಯದ ಹಿಟ್ನಳ್ಳಿ ಫಾರ್ಮ್​ ಬಳಿ ಈ ಅಪಘಾತ ಸಂಭವಿಸಿದೆ.

ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿದ ಅಂಬುಲೆನ್ಸ್ ಇದಾಗಿದ್ದು, ವಿಜಯಪುರದಿಂದ ಬೆಂಗಳೂರು ಕಡೆಗೆ ಆ್ಯಂಬುಲೆನ್ಸ್ ಚಲಾಯಿಸಿಕೊಂಡು ಹೋಗುವಾಗ ವಾಹನದ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಸುಮಾರು 35 ವರ್ಷದ ಚಾಲಕನ ಹೆಸರು ತಿಳಿದುಬಂದಿಲ್ಲ.

ಇಂದು ಬೆಳಗ್ಗೆ ಬೆಂಗಳೂರಿನ ಜಯದೇವ ಆಸ್ಪತ್ರೆಯಿಂದ ರೋಗಿಯೊಬ್ಬನನ್ನು ವಿಜಯಪುರಕ್ಕೆ ಆ್ಯಂಬುಲೆನ್ಸ್​ನಲ್ಲಿ ಕರೆದುಕೊಂಡು ಹೋಗಿ ಬಿಟ್ಟು, ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net