ಭೇರ್ಯ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಹಸ್ತಾಂತರ

SALIGRAMA PHOTO 01
ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸರ್ಕಾರದಿಂದ ನೀಡಲಾದ ನೂತನ ಆಂಬುಲೆನ್ಸ್ ಅನ್ನು ಶಾಸಕ.ಡಿ.ರವಿಶಂಕರ್ ಹಸ್ತಾಂತರಿಸಿದರು.
Published on

ಸಾಲಿಗ್ರಾಮ: ಭೇರ್ಯ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಶಾಸಕ ಡಿ.ರವಿಶಂಕರ್ ಆಂಬುಲೆನ್ಸ್ ನೀಡಿದರು.


ತುರ್ತು ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಸ್ಪತ್ರೆಗೆ ಎರಡು ತಾಲೂಕಿನ ಸಂಪರ್ಕ ಇದ್ದು, ಚಿಕಿತ್ಸೆಗಾಗಿ ಹೆಚ್ಷಿನ ಜನರು ಇಲ್ಲಿಗೆ ಬರುತ್ತಾರೆ. ಇದನ್ನು ಅರಿತು ಆಂಬುಲೆನ್ಸ್ ನೀಡಲಾಗಿದೆ ಎಂದರು.


ಇತ್ತೀಚೆಗೆ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದರು. ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬಂದಿದ್ದರೆ ಆಕೆ ಸಾಯುತ್ತಿರಲಿಲ್ಲ. ಇದನ್ನು ಮನಗಂಡು ಜಿಲ್ಲಾಧಿಕಾರಿ ರಾಜೇಂದ್ರಕುಮಾರ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯೊಂದಿಗೆ ಚರ್ಚಿಸಿ ಆಂಬುಲೆನ್ಸ್ ಕೊಡಲಾಗಿದೆ ಎಂದರು.


ಭೇರ್ಯ ಗ್ರಾಮದ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆರಿಸುವ ಮೂಲಕ ಸಮುದಾಯ ಆರೋಗ್ಯ ಕೇಂದ್ರ ಮಾಡಲು ಈಗಾಗಲೇ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದರು.


ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮೀ ಕೃಷ್ಣೇಗೌಡ, ಉಪಾಧ್ಯಕ್ಷೆ ರೂಪಾ ಹರೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ, ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸೌಜನ್ಯಾ, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಪಿ.ರಮೇಶ್, ಅರ್ಜುನಹಳ್ಳಿ ಗ್ರಾಪಂ ಅಧ್ಯಕ್ಷ ದಿಲೀಪ್, ಮಾಜಿ ಅಧ್ಯಕ್ಷ ಬಿ.ಎಚ್.ಮಹದೇವ್, ಪಿಡಿಒ ಮಂಜುನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net