ವಿದ್ಯುತ್ ಕಂಬಕ್ಕೆ ಆಂಬುಲೆನ್ಸ್ ಡಿಕ್ಕಿ: ಚಾಲಕ, ಸಹಾಯಕ ಪವಾಡಸದೃಶ ಪಾರು

ambulance
ಆಂಬುಲೆನ್ಸ್ ಅಪಘಾತವಾಗಿರುವುದು.
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ
ವಿದ್ಯುತ್ ಕಂಬಕ್ಕೆ ಆಂಬುಲೆನ್ಸ್ ವಾಹನ ಡಿಕ್ಕಿಯಾಗಿ ಚಾಲಕ ಹಾಗೂ ಸಹಾಯಕ ಪವಾಡಸದೃಶ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ಮಂಗಳವಾರ ಮುಂಜಾನೆ ಮುನಿಯಾಲಿನ ಜಂಗಮೇಶ್ವರ ಮಠದ ಕ್ರಾಸ್ ಬಳಿ ಸಂಭವಿಸಿದೆ.

ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಆಸ್ಪತ್ರೆಯ ಆಂಬುಲೆನ್ಸ್ ಇದಾಗಿದ್ದು, ವಾಹನದಲ್ಲಿ ಚಾಲಕ ಹಾಗೂ ಸಹಾಯಕ ಮಾತ್ರ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ರಸ್ತೆಯ ತೀರಾ ಎಡಭಾಗಕ್ಕೆ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಂಬ ತುಂಡಾಗಿದೆ. ಅಪಘಾತದ ಸಂದರ್ಭ ವಿದ್ಯುತ್ ಪ್ರವಹಿಸುತ್ತಿದ್ದು ಬಳಿಕ ವಿದ್ಯುತ್ ಪೂರೈಕೆ ಸ್ಥಗಿತವಾದ ಹಿನ್ನೆಲೆಯಲ್ಲಿ ಚಾಲಕ ಹಾಗೂ ಸಹಾಯಕರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net