ಅಮೆರಿಕ ಸಂಸತ್‌ಗೆ ಬೆಳಗಾವಿಗ ಮರು ಆಯ್ಕೆ

8Manju4
ಅಮೆರಿಕ ದೇಶದ ಚುನಾವಣೆ ಸಂದರ್ಭದಲ್ಲಿ ಕಮಲಾ ಹ್ಯಾರೀಸ್ ಅವರೊಂದಿಗೆ ಬೆಳಗಾವಿಯ ಶ್ರೀನಿವಾಸ್ ಠಾಣೇದಾರ.
Published on

ಬೆಳಗಾವಿ: ವಿಶ್ವವೇ ಕುತೂಹಲದಿಂದ ಕಾಯುತ್ತಿದ್ದ ಅಮೆರಿಕ ಚುನಾವಣೆಯಲ್ಲಿ ಮಿಚಿಗನ್ ರಾಜ್ಯದಿಂದ ಸ್ಪರ್ಧಿಸಿದ್ದ ಬೆಳಗಾವಿ ಮೂಲದ ಅಮೆರಿಕದ ಉದ್ಯಮಿ ಶ್ರೀನಿವಾಸ್ ಠಾಣೇದಾರ್ ಅವರು ಎರಡನೇ ಬಾರಿ ಗೆಲುವು ಸಾಧಿಸಿದ್ದಾರೆ.

ಅಮೆರಿಕದಲ್ಲಿ ಆಡಳಿತಾ ರೂಢ ಡೆಮಾಕ್ರಾಟಿಕ್ ಪಕ್ಷದಿಂದ ಸ್ಪರ್ಧಿಸಿದ್ದ ಶ್ರೀನಿವಾಸ ಠಾಣೇದಾರ್ ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಮಿಚಿಗನ್ ಕ್ಷೇತ್ರದಿಂದ ಸತತವಾಗಿ ಎರಡು ಬಾರಿ ಯಾರೂ ಗೆದ್ದಿರಲಿಲ್ಲ. ಉದ್ಯಮಿ ಹಾಗೂ ವಿಜ್ಞಾನಿಯಾಗಿ ಅಮೆರಿಕಾದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ತಮ್ಮ ಸಾಮಾಜಿಕ ಚಟುವಟಿಕೆಗಳ ಮೂಲಕವೇ ಕ್ಷೇತ್ರದಲ್ಲಿ ಜನಪ್ರಿಯರಾಗಿದ್ದಾರೆ. ಶ್ರೀನಿವಾಸ ಠಾಣೇದಾರ ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ 1955ರ ಫೆ.22ರಂದು ಜನಿಸಿದ್ದಾರೆ. ಅವರ ತಂದೆ ಬೆಳಗಾವಿ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದರು.

ಬೆಳಗಾವಿ ನಗರದ ಶಹಾಪುರದ ಮೀರಾಪುರ ಗಲ್ಲಿಯಲ್ಲಿ ವಾಸವಿದ್ದ ಶ್ರೀನಿವಾಸ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಚಿಂತಾಮಣರಾವ್ ಸರ್ಕಾರಿ ಪದವಿ ಪೂರ್ವ ಶಾಲೆಯಲ್ಲಿ ಪೂರ್ಣಗೊಳಿಸಿದ್ದಾರೆ. ಬಳಿಕ ಪಿಯುಸಿ ಬೆಳಗಾವಿ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಮುಗಿಸಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಪದವಿ ಪಡೆದಿದ್ದಾರೆ.1977ರಲ್ಲಿ ಬಾಂಬೆ ವಿಶ್ವವಿದ್ಯಾಲಯದಿಂದ ರಸಾಯನ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.1979ರಲ್ಲಿ ಅಮೆರಿಕಕ್ಕೆ ತೆರಳಿದ್ದರು. 1982ರಲ್ಲಿ ಪಾಲಿಮರ್ ಕೆಮಿಸ್ಟ್ರಿ ವಿಷಯದಲ್ಲಿ ಅಲ್ಲೇ ಪಿಎಚ್.ಡಿ ಪದವಿ ಪಡೆದಿದ್ದಾರೆ.

1982ರಿಂದ 1984ರ ವರೆಗೆ ಮಿಚಗನ್ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸಿದ್ದರು. 1984ರಿಂದ 1990ರ ವರೆಗೆ ಪಾಲಿಮರ್ ಸಿಂಥೆಸಿಸ್ ಕೆಮಿಸ್ಟ್ ಹಾಗೂ ಪ್ರಾಜೆಕ್ಸ್ ಲೀಡರ್ ಆಗಿ ಪೆಟ್ರೊಲೈಟ್ ಕಾರ್ಪೊರೇಷನ್‌ನಲ್ಲಿ ಕಾರ್ಯನಿರ್ವಹಿಸಿದ್ದರು. ಬಳಿಕ ಸ್ವಂತ ಉದ್ಯಮ ಆರಂಭಿಸಿದ್ದಾರೆ. ಇದೀಗ ಚುನಾವಣೆಯಲ್ಲಿ ಸತತ ಗೆಲುವು ಸಾಧಿಸಿದ್ದು ಭಾರತೀಯರ ಹೆಮ್ಮೆಯ ವಿಷಯವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net