ಹಾಥರಸ್ ಘಟನೆಗೆ ಖಂಡನೆ

AMD 7-1
Published on

ಅಮೀನಗಡ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ನಡೆದ ಅತ್ಯಾಚಾರ ಘಟನೆ ಖಂಡಿಸಿ ಕರವೇ ಜಿಲ್ಲಾಧ್ಯಕ್ಷ ಹಾಗೂ ಕಾರ್ಯಕರ್ತರು ಗುಡೂರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿ ಕಂದಾಯ ನಿರೀಕ್ಷಕ ನವೀನ ಬಲಕುಂದಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಕರವೇ ಜಿಲ್ಲಾಧ್ಯಕ್ಷ ರಮೇಶ ಬದ್ನೂರ ಮಾತನಾಡಿ, ಉತ್ತರ ಪ್ರದೇಶದಲ್ಲಿ ಜರುಗಿದ ಅತ್ಯಂತ ಅಮಾನವೀಯ ಕೃತ್ಯ ಇದಾಗಿದೆ. ಶಾಂತಿ, ಸಮಾನತೆ, ನೆಮ್ಮದಿಗೆ ಮಾನ್ಯತೆ ಇಲ್ಲದಂತಾಗಿದೆ.

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಸಂವಿಧಾನದಲ್ಲಿ ತಿದ್ದುಪಡಿ ತಂದು ಇಂತಹ ಕೃತ್ಯ ಎಸಗಿದವರಿಗೆ ಘನಘೋರ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ಕರವೇ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ರಂಜಾನ್ ನದಾಪ್, ಗುಡೂರು ಗ್ರಾಮ ಕರವೇ ಘಟಕದ ಅಧ್ಯಕ್ಷ ಶಿವಕುಮಾರ ಸಾಲಿಮಠ, ಪ್ರಧಾನ ಕಾರ್ಯದರ್ಶಿ ಫಕ್ರುದ್ದೀನ್ ವಾಲಿಕಾರ, ಅಲ್ಲಾಭಕ್ಷಿ ವಾಲಿಕಾರ, ಸಲೀಂ ಜರತಾರಿ, ರಫೀಕ್ ಇಟಗಿ ಸೇರಿದಂತೆ ಮತ್ತಿತರರು ಉಪಸ್ಥ್ಥಿತರಿದ್ರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net