ಅಮಿತ್ ಕೋರೆ ರಾಜಕೀಯ ಪ್ರವೇಶಿಸಲಿ

23Manjri1
ಕಾರ್ಖಾನೆ ಉಪಾಧ್ಯಕ್ಷ ತಾತ್ಯಾಸಾಹೇಬ ಕಾಟೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಖಾನೆ ನಿರ್ದೇಶಕರಾದ ಅಜಿತ ದೇಸಾಯಿ, ಮಲ್ಲಪ್ಪ ಮೈಶಾಳೆ, ಚೇತನ ಪಾಟೀಲ, ಮಹಾವೀರ ಕಾತ್ರಾಳೆ, ಭೀಮಗೌಡ ಪಾಟೀಲ, ಅಣ್ಣಾಸಾಬ ಇಂಗಳೆ, ಕೆಎಲ್‌ಇ ಆಡಳಿತಾಧಿಕಾರಿ ಡಾ.ಅಲ್ಲಮಪ್ರಭು ಕುಡಚಿ ಇತರರು ಇದ್ದರು.
Published on

ಮಾಂಜರಿ: ರೈತರು, ಕಾರ್ಮಿಕರು, ಬಡವರ ಏಳಿಗೆಯ ಬಗ್ಗೆ ಚಿಂತಿಸುವ ಸರಳ, ಪ್ರಾಮಾಣಿಕ, ಸಜ್ಜನಿಕೆ ವ್ಯಕ್ತಿತ್ವವುಳ್ಳ ಅಮಿತ್ ಕೋರೆ ಅವರು ರಾಜಕೀಯ ಪ್ರವೇಶಿಸಬೇಕೆಂದು ನಮ್ಮೆಲ್ಲರ ಒತ್ತಾಸೆಯಾಗಿದೆ ಎಂದು ಕಾರ್ಖಾನೆಯ ನಿರ್ದೇಶಕ ಭರತೇಶ ಬನವಣೆ ಹೇಳಿದರು.

ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಹಾಗೂ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳ ಸಂಚಾಲಕ ಅಮಿತ್ ಕೋರೆ ಅವರ 45ನೇ ಜನ್ಮದಿನವನ್ನು ಗಂಗಾ ಶುಗರ್ ಶಾಲಾ ವಿದ್ಯಾರ್ಥಿಗಳೊಂದಿಗೆ ಕೇಕ್ ಕತ್ತರಿಸಿ ಭಾನುವಾರ ಸರಳವಾಗಿ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಅವರು, ಅಮಿತ್ ಕೋರೆ ಮೂಲಕ ರಾಜ್ಯ ಮತ್ತು ರಾಷ್ಟ್ರ ರಾಜಕಾರಣಕ್ಕೆ ಒಬ್ಬ ಅಭಿವೃದ್ಧಿಪರ ಹಾಗೂ ದೂರದೃಷ್ಟಿಯುಳ್ಳ ರಾಜಕಾರಣಿ ಲಭಿಸುವಂತಾಗಲಿ ಎಂದು ಹಾರೈಸಿದರು. ಕಾರ್ಖಾನೆಯ ರೂವಾರಿ ಡಾ. ಪ್ರಭಾಕರ ಕೋರೆ ಅವರ ಮಾರ್ಗದರ್ಶನ ಹಾಗೂ ಅಮಿತ್ ಕೋರೆ ಅವರ ನೇತೃತ್ವದಲ್ಲಿ ಕಾರ್ಖಾನೆ ನಿರಂತರವಾಗಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಅಮಿತ್ ಕೋರೆ ಅವರು ಅತ್ಯಂತ ಕಡಿಮೆ ವಯಸ್ಸಿನಲ್ಲಿ ಹಲವು ಜವಾಬ್ದಾರಿಯುತ ಹುದ್ದೆ ವಹಿಸಿಕೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಸಕ್ಕರೆ ಉದ್ಯಮದಲ್ಲಿ ಅಪಾರ ಜ್ಞಾನ ಹೊಂದಿರುವ ಅವರು ಸಹಕಾರ ಕ್ಷೇತ್ರದಲ್ಲಿಯ ನಮ್ಮ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ಹೆಚ್ಚಿಸಿ, ಮೆ.ಶಿವಶಕ್ತಿ ಶುಗರ್ಸ್ ಹಾಗೂ ಮೆ.ಹರ್ಮ್ಸ್ ಡಿಸ್ಟಿಲರಿ ಕೈಗಾರಿಕೆ ಸ್ಥಾಪಿಸಿ ಈ ಭಾಗದ ಯುವಕರಿಗೆ ಉದ್ಯೋಗ ನೀಡಿ ಆರ್ಥಿಕ ಸಬಲರಾಗುವಂತೆ ಮಾಡಿದ್ದಾರೆ ಎಂದರು. ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಆರ್.ಬಿ.ಖಾಂಡಗಾವೆ ಮಾತನಾಡಿ, ಅಮಿತ್ ಕೋರೆ ಅವರ ಹಲವು ಸಾಧನೆಗಳ ಬಗ್ಗೆ ವಿವರಿಸಿದರು. ಗಂಗಾ ಶುಗರ್ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ಆಯೋಜಿಸಲಾಗಿದ್ದ ಕ್ರೀಡಾ ಸ್ಪರ್ಧೆ ವಿಜೇತರಿಗೆ ಹಾಗೂ ವಿದ್ಯಾರ್ಥಿಗಳ ತಾಯಂದಿರಿಗಾಗಿ ಆಯೋಜಿಸಲಾಗಿದ್ದ ಅಡುಗೆ ಹಾಗೂ ರಂಗೋಲಿ ಸ್ಪರ್ಧೆಗಳಲ್ಲಿನ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಗಂಗಾ ಶುಗರ್ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಕಾರ್ಖಾನೆ ನಿವೇಶನದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಕಬ್ಬು ಕಟಾವು ಕಾರ್ಮಿಕರ ಮಕ್ಕಳ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ ವಿತರಿಸಿ ಸಿಹಿ ಹಂಚಲಾಯಿತು. ಕ್ರೀಡಾ ಕೂಟಗಳಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಖಾನೆಯ ಆವರಣದಲ್ಲಿ ಸಸಿ ನೆಡುವ ಮೂಲಕ ಜನ್ಮದಿನ ಆಚರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net