ಕೇಂದ್ರ ಸಚಿವ ಅಮಿತ್ ಶಾ ಆಗಮನ; ಮೈಸೂರು ಪೇಟ ತೊಡಿಸಿ ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

1259388
Published on

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಮೈಸೂರು ಪೇಟ ತೊಡಿಸಿ ಸಿಎಂ ಬಸವರಾಜ ಬೊಮ್ಮಯಿ ಸ್ವಾಗತ ಕೋರಿದ್ದಾರೆ.

ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಅರಗ ಜ್ಞಾನೇಂದ್ರ, ಗೋಪಾಲಯ್ಯ, ಆನಂದ್ ಸಿಂಗ್, ಶಾಸಕ ರವಿಸುಬ್ರಮಣ್ಯ ಈ ವೇಳೆ ಉಪಸ್ಥಿತರಿದ್ದರು. ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿರುವ ಅಮಿತ್ ಶಾ, ಏಪ್ರಿಲ್ 1ರಂದು ಹೆಚ್​​ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ತೆರಳಲಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀ ಶಿವಕುಮಾರ ಸ್ವಾಮೀಜಿಗಳ 115 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ಸಿದ್ದಗಂಗಾ ಮಠದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net