ಮುಂಜಾನೆ ಮೈಸೂರಿಗೆ ಆಗಮಿಸಿದ ಅಮಿತ್ ಷಾ

Amit Shah arrived in Mysore early in the morning
Published on

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಸಲುವಾಗಿ ನಗರಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ನಗರದಲ್ಲಿ ಜಿಲ್ಲಾಡಳಿತದಿಂದ ಸ್ವಾಗತ ಕೋರಲಾಯಿತು.

ಮುಂಜಾನೆ 2.40ಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ನೇತೃತ್ವದಲ್ಲಿ ಜಿಲ್ಲಾಡಳಿತದಿಂದ ಸ್ವಾಗತ ಕೋರಲಾಯಿತು.

ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಪ್ರತಾಪ ಸಿಂಹ, ಶಾಸಕ ಶ್ರೀವತ್ಸ, ಮಾಜಿ ಶಾಸಕರಾದ ಎಲ್. ನಾಗೇಂದ್ರ, ಹರ್ಷವರ್ಧನ್, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net