

ಬೆಂಗಳೂರು: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ‘ಅಮ್ಮ' ಪ್ರಶಸ್ತಿಗೆ ಭಾರತಿ ಹೆಗಡೆ, ಸುರೇಶ ನಾಗಲಮಡಿಕೆ, ಕೆ.ಎ.ದಯಾನಂದ, ಕಿರಣ್ ಭಟ್, ಶ್ರೀನಿವಾಸ ಸಿರನೂರಕರ್, ನದೀಂ ಸನದಿ ಮತ್ತು ಸತ್ಯಮಂಗಲ ಮಹಾದೇವ ಅವರ ಕೃತಿಗಳು ಆಯ್ಕೆಯಾಗಿವೆ.
ಭಾರತಿ ಹೆಗಡೆ ಅವರ ‘ಸೀತಾಳೆದಂಡೆಯ ಕಥೆಗಳು (ಕಥಾ ಸಂಕಲನ), ಸುರೇಶ ನಾಗಲಮಡಿಕೆ ಅವರ ‘ಹಾಡು ಕಲಿಸಿದ ಹರ (ಸಂಸ್ಕೃತಿ ಸಂಕಥನ), ಕೆ.ಎ.ದಯಾನಂದ ಅವರ ಹಾದಿಗಲ್ಲು (ಆತ್ಮಕಥನ), ಕಿರಣ್ ಭಟ್ ಅವರ ರಂಗ ಕೈರಳಿ (ಪ್ರವಾಸ ಕಥನ), ಕಲಬುರಗಿಯ ಶ್ರೀನಿವಾಸ ಸಿರನೂರಕರ್ ಅವರ ಪುರಂದರದಾಸರ ಬಂಡಾಯ ಪ್ರಜ್ಞೆ (ವೈಚಾರಿಕ ಸಂಕಲನ), ನದೀಂ ಸನದಿ ಅವರ ‘ಹುಲಿಯ ನೆತ್ತಿಯ ನೆರಳು ಮತ್ತು ಡಾ. ಸತ್ಯಮಂಗಲ ಮಹಾದೇವ ಅವರ ‘ಪಂಚವರ್ಣದ ಹಂಸ (ಕವನ ಸಂಕಲನ) ಕೃತಿಗಳನ್ನು 20 ನೇ ವರ್ಷದ ‘ಅಮ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ‘ಅಮ್ಮ ಪ್ರಶಸ್ತಿ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.
ಪ್ರಶಸ್ತಿಯು ತಲಾ 5 ಸಾವಿರ ರೂ.ನಗದು, ಪುರಸ್ಕಾರ, ನೆನಪಿನ ಕಾಣಿಕೆ, ಪ್ರಮಾಣ ಪತ್ರ ಒಳಗೊಂಡಿವೆ. ನ.26ರಂದು ಕಲಬುರಗಿಯ ಸೇಡಮ್‌ನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.