ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಅಮ್ಮ ಫೌಂಡೇಷನ್ ಆದ್ಯತೆ

nrp amma foundation
Published on

ಎನ್.ಆರ್.ಪುರ: ಅಮ್ಮ ಫೌಂಡೇಷನ್ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಅಮ್ಮ ಫೌಂಡೇಷನ್ ಅಧ್ಯಕ್ಷ ಸುಧಾಕರ ಎಸ್. ಶೆಟ್ಟಿ ತಿಳಿಸಿದರು.

ನಾಗರಮಕ್ಕಿ ದುರ್ಗಾಪರಮೇಶ್ವರಿ ಸಮುದಾಯ ಭವನದಲ್ಲಿ ಅಮ್ಮ ಫೌಂಡೇಷನ್‌ನಿಂದ 27ನೇ ಉಚಿತ ಆರೋಗ್ಯ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ,ಶೃಂಗೇರಿ ಕ್ಷೇತ್ರ ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರ ಹಿಂದುಳಿದಿದೆ. ಮೂಲ ಸೌಕರ್ಯದ ಕೊರತೆಯಿಂದ ಗ್ರಾಮೀಣ ಭಾಗದ ಅನೇಕ ಸರ್ಕಾರಿ ಶಾಲೆಗಳು ಮುಚ್ಚುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದೆ ಎಂದರು.

ಅಮ್ಮ ಫೌಂಡೇಷನ್‌ನಿಂದ 10 ಆಸ್ಪತ್ರೆಗಳ ಜತೆ ಒಪ್ಪಂದ ಮಾಡಿಕೊಂಡಿದೆ. ಶಿಬಿರದಲ್ಲಿ ನೇತ್ರ ಪರೀಕ್ಷೆ ಮಾಡಿಸಿದ ರೋಗಿಗಳಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದ್ದರೆ ಅವರನ್ನು ಮಣಿಪಾಲ ಕೆಎಂಸಿಆಸ್ಪತ್ರೆಗೆ ಕರೆದೊಯ್ದು ಉಚಿತ ಶಸ್ತ್ರ ಚಿಕಿತ್ಸೆ ಮಾಡಿಸಿ ನಂತರ ಮನೆಗೆ ಕರೆ ತಂದು ಬಿಡಲಾಗುವುದು. ಶಸ್ತ್ರ ಚಿಕಿತ್ಸೆ ಮಾಡಿಸಿದ ನಂತರ ವೈದ್ಯರು ಸೂಚಿಸಿದ ದಿನ ಮತ್ತೆ ಶಿಬಿರ ನಡೆದ ಸ್ಥಳಕ್ಕೆ ಕರೆತಂದು ಮರು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.

ಯಡಗೆರೆ ಸುಬ್ರಹ್ಮಣ್ಯ ಮಾತನಾಡಿ,ಅಮ್ಮ ಫೌಂಡೇಷನ್ ಆರೋಗ್ಯ ಶಿಬಿರ ನಡೆಸುವ ಮೂಲಕ ಸಮಾಜದ ಎಲ್ಲರೂ ಆರೋಗ್ಯವಾಗಿರಬೇಕು ಎಂಬ ಆಶಯಹೊಂದಿದೆ. 40 ವರ್ಷದ ನಂತರ ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಅಮ್ಮ ಫೌಂಡೇಷನ್ ಉದ್ಯೋಗ ಮೇಳ ನಡೆಸಿ ಸಾವಿರಾರರು ನಿರುದ್ಯೋಗ ಯುವ ಜನರಿಗೆ ಮಾರ್ಗದರ್ಶನ ಮಾಡಿದ್ದಾರೆ. ಇದೇ ರೀತಿ ಗಾರ್ಮೆಂಟ್ಸ್ ಪ್ರಾರಂಭಿಸಿದರೆ ಹಲವಾರು ಮಹಿಳೆಯರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net