ಅಮ್ಮತ್ತಿಯಲ್ಲಿ ಇಂದಿನಿಂದ ರಾಷ್ಟ್ರಮಟ್ಟದ ಫುಟ್ಬಾಲ್

19mdkj3 - Copy
Published on

ವಿಜಯವಾಣಿ ಸುದ್ದಿಜಾಲ ಸಿದ್ದಾಪುರ

ಅಮ್ಮತ್ತಿಯ ಮಿಲನ್ಸ್ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ಜ.೨೦ ರಿಂದ ೨೯ ರವರೆಗೆ ಅಮ್ಮತ್ತಿಯಲ್ಲಿ ರಾಷ್ಟ್ರಮಟ್ಟದ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಮಿಲನ್ಸ್ ಫುಟ್ಬಾಲ್ ಕ್ಲಬ್ ಅಧ್ಯಕ್ಷ ಲಿಜೇಶ್ ಹೇಳಿದ್ದಾರೆ.

ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ಅಮ್ಮತ್ತಿ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಿರುವ ಪಂದ್ಯಾವಳಿ ಯಲ್ಲಿ ೧೬ ತಂಡ ಭಾಗವಹಿಸುತ್ತಿವೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜ.೨೦ ರಂದು ರಾತ್ರಿ ೭.೩೦ ಕ್ಕೆ ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಐ.ಎಂ. ವಿಜಯನ್ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ, ವಿಧಾನ ಪರಿಷತ್ ಸದಸ್ಯ ಎಂ.ಪಿ ಸುಜಾ ಕುಶಾಲಪ್ಪ, ಕಾರ್ಮಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ನಿರನ್ ನಾಣಯ್ಯ, ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಫೈನಲ್ ಪಂದ್ಯಾಟ ಹಾಗೂ ಸಮಾರೋಪ ಸಮಾರಂಭ ೨೯ ರಂದು ನಡೆಯಲಿದೆ. ಪಂದ್ಯಾಟ ವೀಕ್ಷಣೆಗೆ ೧೬ ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿದೆ. ೧೬ ವರ್ಷ ಮೇಲ್ಪಟ್ಟವರಿಗೆ ೧೦೦ ರೂಪಾಯಿ ಗ್ಯಾಲರಿ ಪ್ರವೇಶ ಶುಲ್ಕ ನಿಗದಿ ಪಡಿಸಲಾಗಿದೆ ಎಂದರು. ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಶೀದ್, ಉಪಾಧ್ಯಕ್ಷ ಮುಸ್ತಫಾ, ಖಜಾಂಚಿ ಭವಿನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net