

ಕಾರ್ಕಳ: ವಿದ್ಯಾರ್ಥಿಗಳು ಮಹತ್ವಾಕಾಂಕ್ಷಿಗಳಾಗಿರಬೇಕು. ಜಾಗತಿಕವಾಗಿ ಯುವಜನಾಂಗ ಸಂಖ್ಯೆ ಇಳಿಮುಖವಾಗುತ್ತಿದ್ದು, ಭಾರತೀಯ ಯುವಜನಾಂಗಕ್ಕೆ ವಿಪುಲ ಅವಕಾಶಗಳು ಲಭ್ಯವಾಗುತ್ತಿವೆ ಎಂದು ನಿಟ್ಟೆ ಪರಿಗಣಿತ ವಿಶ್ವ ವಿದ್ಯಾಲಯದ ಅಂತಾರಾಷ್ಟ್ರೀಯ ಸಹಯೋಗಗಳ ನಿರ್ದೇಶಕ ಪ್ರೋ.ಹರಿಕೃಷ್ಣ ಭಟ್ ಹೇಳಿದರು.
ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ 38ನೇ ವಿದ್ಯಾರ್ಥಿ ಪರಿಷತ್ ಉದ್ಘಾಟಿಸಿ ಮಾತನಾಡಿದರು.
ಅರ್ಥಮೀಡಿಯ ಗ್ರೂಪ್‌ನ ನಿರ್ದೇಶಕ ಪ್ರಶಾಂತ್ ಎನ್.ಶೆಟ್ಟಿ ಮಾತನಾಡಿದರು. ಪ್ರಾಂಶುಪಾಲೆ ಡಾ.ವೀಣಾಕುಮಾರಿ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರಕಾಶ್ ಮತ್ತು ವಿದ್ಯಾರ್ಥಿ ಪರಿಷತ್ ಸಂಯೋಜಕಿ ಮಾಲಿನಿ ಜೆ. ಉಪಸ್ಥಿತರಿದ್ದರು. ಶ್ರೀವತ್ಸ ಭಟ್ ವಿದ್ಯಾರ್ಥಿ ಪರಿಷತ್‌ನ ವಾರ್ಷಿಕ ಯೋಜನೆಗಳನ್ನು ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಮನಾ ಎಂ.ಕೆ. ಸ್ವಾಗತಿಸಿದರು. ರೇಖಾ ವಂದಿಸಿದರು. ವಿಷಾಕ್ವಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.