ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ವಿಪುಲ ಅವಕಾಶ

12ark1
ಅರಕಲಗೂಡು ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಂಶೋಧನೆ ಮತ್ತು ಅವಕಾಶಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಯುವ ವಿಜ್ಞಾನಿ ಡಾ. ಕೋಮಲ್‌ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಮಹೇಶ್ ಹೊಡೇನೂರು, ಚಂದ್ರಶೇಖರ್, ದಶರಥ ಇತರರಿದ್ದರು.
Published on

ಅರಕಲಗೂಡು: ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗ ಪಡಿಸಿಕೊಂಡರೆ ಉನ್ನತ ಸಾಧನೆ ಕಟ್ಟಿಟ್ಟ ಬುತ್ತಿ ಎಂದು ಯುವ ವಿಜ್ಞಾನಿ ಡಾ.ಕೋಮಲ್‌ಕುಮಾರ್ ತಿಳಿಸಿದರು.

ಪಟ್ಟಣದ ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಂಶೋಧನೆ ಮತ್ತು ಅವಕಾಶಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಲ್ಲೇ ಉನ್ನತ ಜ್ಞಾನ ಸಂಪಾದನೆ ಮಾಡಬೇಕು. ವಿದೇಶಗಳಲ್ಲಿ ಸಂಶೋಧನೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗಲಿದೆ ಎಂದರು.

ಪರಿಸರದ ಸಮತೋಲನ ಕಾಪಾಡುವುದರಿಂದ ಕಾಯಿಲೆಗಳನ್ನು ಪ್ರಾಯಶಃ ತಡೆಗಟ್ಟಬಹುದು. ಯಾವುದೇ ಕಾಯಿಲೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಬಹುದೇ ಹೊರತು ಶಾಶ್ವತ ಪರಿಹಾರ ಅಸಾಧ್ಯ. ಅದರಲ್ಲೂ ಸಾಂಕ್ರಾಮಿಕ ರೋಗಗಳು ಮನುಕುಲದ ಶತ್ರು. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕೆಯ ಕ್ರಮಗಳು ಅತ್ಯವಶ್ಯಕ ಎಂದು ತಿಳಿಸಿದರು.

ಪ್ರಾಂಶುಪಾಲ ಮಹೇಶ್ ಹೊಡೇನೂರು, ಉಪನ್ಯಾಸಕರಾದ ಕೆ.ಎನ್.ಚಂದ್ರಶೇಖರ್, ಎಂ.ಎಸ್.ದಶರಥ, ಶಶಿಧರ್, ಜಗದೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net