

ಹೊನ್ನಾಳಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹೊನ್ನಾಳಿ ಬಿಜೆಪಿ ಘಟಕ ಹಮ್ಮಿಕೊಂಡಿರುವ ಹರ್‌ಘರ್ ತಿರಂಗಾ ಅಭಿಯಾನದ ಜಾಗೃತಿ ಮೂಡಿಸುವ ಬೈಕ್ ರ‌್ಯಾಲಿಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಚಾಲನೆ ನೀಡಿದರು.
ಹಿರೇಕಲ್ಮಠದಲ್ಲಿ ಆರಂಭವಾದ ಬೈಕ್ ರ‌್ಯಾಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿತು. ತ್ರಿವಣ ಧ್ವಜ ಹಿಡಿದ ನೂರಾರು ಕಾರ್ಯಕರ್ತರು ದೇಶಭಕ್ತಿಯ ಜಯಘೋಷ ಕೂಗಿದರು.
ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಹೋರಾಟಗಾರರ ಬಲಿದಾನವಾಗಿದೆ. ಅನೇಕರ ಪ್ರಾಣತ್ಯಾಗ ಮಾಡಿದ್ದು, ಅವರ ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಪುರಸಭಾಧ್ಯಕ್ಷ ರಂಗನಾಥ್, ಮಾಜಿ ಅಧ್ಯಕ್ಷ ಬಾಬು ಹೋಬಳದಾರ್, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ಜಿಲ್ಲಾ ಉಪಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ಅರಕೆರೆ, ಪ್ರಧಾನ ಕಾರ್ಯದರ್ಶಿ ಶಿವಾನಂದ್, ಯುವ ಮೋರ್ಚಾ ಅಧ್ಯಕ್ಷ ವಿಕಾಸ್ ಕುಂಬಳೂರು, ಮಹೇಶ್ ಹುಡೇದ್, ಮಂಜುನಾಥ್ ಇಂಚರ ಇತರರು ಪಾಲ್ಗೊಂಡಿದ್ದರು.