ಅಮೃತ ಮಹೋತ್ಸವ ಯಶಸ್ವಿಗೆ ಸಹಕರಿಸಿ

Indi-24-2
ಇಂಡಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದರು. ಹಾಲು ಒಕ್ಕೂಟದ ಅಧ್ಯಕ್ಷ ಸಂಬಾಜಿ ಮಿಸಾಳೆ, ಜಟ್ಟೆಪ್ಪ ರವಳಿ, ಪ್ರಶಾಂತ ಕಾಳೆ, ಕಾಮೇಶ ಉಕ್ಕಲಿ ಇತರರಿದ್ದರು.
Published on

ಇಂಡಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಇಂಡಿ ಮತಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೆ ಸಹಕರಿಸೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಸಿದ್ದರಾಮಯ್ಯ ಅವರ ಜನ್ಮದಿನದ ಪ್ರಯುಕ್ತ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮಕ್ಕೆ ರಾಷ್ಟ್ರ, ರಾಜ್ಯ ನಾಯಕರು, ಅಪಾರ ಅಭಿಮಾನಿಗಳು ಸೇರಿ ಅಂದಾಜು 8ರಿಂದ 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದರು.

2013ರಲ್ಲಿ ಮುಖ್ಯಮಂತ್ರಿ ಅವಧಿಯಲ್ಲಿ ಇಂಡಿ ಮತಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ. ಈ ಭಾಗದ ನೀರಾವರಿ ಯೋಜನೆಗೆ ಕಾಯಕಲ್ಪ ನೀಡಿದ್ದಾರೆ. ಇಂಡಿಯಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಸ್ಥಾಪಸಿದ್ದಲ್ಲದೆ, ಭೀಮಾಶಂಕರ ಕಾರ್ಖಾನೆಗೆ ಸಹಾಯ ಮಾಡಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ, ಸಾಲಮನ್ನಾ ಯೋಜನೆ ನೀಡಿದ್ದಾರೆ ಎಂದರು.

ಹಾಲು ಒಕ್ಕೂಟದ ಅಧ್ಯಕ್ಷ ಸಂಬಾಜಿ ಮಿಸಾಳೆ, ಜಟ್ಟೆಪ್ಪ ರವಳಿ, ಪ್ರಶಾಂತ ಕಾಳೆ, ಕಾಮೇಶ ಉಕ್ಕಲಿ, ಭೀಮಣ್ಣ ಕೌಲಗಿ, ಅಣ್ಣಾರಾಯ ಬಿದರಕೋಟಿ ಮಾತನಾಡಿದರು. ಇಲಿಯಾಸ್ ಬೋರಾಮಣಿ, ಕಲ್ಲನಗೌಡ ಬಿರಾದಾರ, ಮಂಜು ಕಾಮಗೊಂಡ, ಶ್ರೀಕಾಂತ ಕೂಡಿನೂರ, ಕೆಪಿಸಿಸಿ ಸದಸ್ಯ ಮಲ್ಲನಗೌಡ ಬಿರಾದಾರ, ಸತೀಶ ಕುಂಬಾರ, ಉಮೇಶ ದೇಗಿನಾಳ, ಯಶವಂತ ಕೊಳುರಗಿ, ಜೈನುದ್ದೀನ್ ಬಾಗವಾನ, ಸತ್ತಾರ ಬಾಗವಾನ, ಮುನ್ನಾ ಡಾಂಗೆ, ಮಹಿಬೂಬ ಅರಬ, ನಿರ್ಮಲಾ ತಳಕೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net