ಸಂಸ್ಕಾರ ಕಲಿಸುವ ಅಮೃತಭಾರತಿ ಸಂಸ್ಥೆ

sanmana
Published on

ಹೆಬ್ರಿ: ಭಾರತದ ಯುವಪೀಳಿಗೆ ಹಲವಾರು ದುಶ್ಚಟಗಳಿಗೆ ಬಲಿಯಾಗುತ್ತಿರುವ ಕಾಲಘಟ್ಟದಲ್ಲಿ ಅಮೃತ ಭಾರತಿ ವಿಭಿನ್ನ ರೀತಿಯ ಶಿಕ್ಷಣ ನೀಡುತ್ತಾ ಸಂಸ್ಕೃತಿ ಸಂಸ್ಕಾರವನ್ನು ಯುವ ಮನಸ್ಸಿನಲ್ಲಿ ಬಿತ್ತರಿಸುವ ಕೆಲಸ ಮಾಡುತ್ತಿದೆ ಎಂದು ಆರ್‌ಎಸ್‌ಎಸ್ ಸಂಘದ ಪ್ರಚಾರಕ ಸುಧೀರ್ ನಾಯಕ್ ಹೆಬ್ರಿ ಹೇಳಿದರು.

ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯವೈಖರಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ದತ್ತಿ ನಿಧಿ ಪುರಸ್ಕಾರ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ, ಉತ್ತಮ ಅಂಕಗಳಿಸಿದವರನ್ನು ಪುರಸ್ಕರಿಸಲಾಯಿತು.

ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿ ಬಾಲಕೃಷ್ಣ ಮಲ್ಯ, ಭಾಸ್ಕರ್ ಜೋಯಿಸ್, ಹಾಸ್ಟೆಲ್ ಕಮಿಟಿ ಸದಸ್ಯ ರಾಮಕೃಷ್ಣ ಆಚಾರ್ಯ, ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯಕುಮಾರ್ ಶೆಟ್ಟಿ , ಪದ್ಮಶ್ರೀ, ಆರಾಧನ್ ಪಾಲೇಕರ್ ಉಪಸ್ಥಿತರಿದ್ದರು. ಪದ್ಮಶ್ರೀ ಸ್ವಾಗತಿಸಿದರು. ಆರಾಧನೆ ಪಾಲೇಕರ್ ವಂದಿಸಿದರು. ಸುತೇಜ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net