ಸ್ಟೆಮ್ ರೋಬೋ ಚಾಂಪಿಯನ್‌ಶಿಪ್‌ನಲ್ಲಿ ಅಮೃತ ಭಾರತಿ ವಿದ್ಯಾರ್ಥಿಗಳು ಭಾಗಿ

amrutha bharathi
amrutha bharathi
Published on

ಹೆಬ್ರಿ: ದೆಹಲಿಯಲ್ಲಿ ನಡೆದ ಸ್ಟೆಮ್ ರೋಬೋ ಚಾಂಪಿಯನ್ ಶಿಪ್‌ನಲ್ಲಿ ಹೆಬ್ರಿ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಪ್ರೀತಮ್, ಮನ್ವಿತ್ ವಿಜ್ಞಾನ ಮಾದರಿ ಪ್ರದರ್ಶನ ಮಾಡಿದರು.

120 ಶಾಲೆಗಳಿಂದ 10,000 ಕ್ಕೂ ಹೆಚ್ಚು ನವೀನ ವಿಚಾರಗಳನ್ನು ಒಳಗೊಂಡ ಕಠಿಣ ಆಯ್ಕೆ ಪ್ರಕ್ರಿಯೆಯ ನಂತರ, ವಿದ್ಯಾರ್ಥಿಗಳ ವಿಜ್ಞಾನ ಮಾದರಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಆಯ್ಕೆ ಮಾಡಲಾಗಿದೆ. ಈ ಗಮನಾರ್ಹ ಸಾಧನೆಯು ವಿದ್ಯಾರ್ಥಿಗಳ ಸೃಜನಶೀಲತೆ, ಸಮರ್ಪಣೆ ಮತ್ತು ಸ್ಟೆಮ್ ಮೇಲಿನ ಉತ್ಸಾಹಕ್ಕೆ ಸಾಕ್ಷಿಯಾಗಿದೆ. ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್, ಹಳೇ ವಿದ್ಯಾರ್ಥಿ ಅಂಕಿತ್ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಯನ್ನು ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಪ್ರಶಂಸಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net