ಅಮ್ಟೂರು ಶ್ರೀಕೃಷ್ಣ ಮಂದಿರ ಮೊಸರು ಕುಡಿಕೆ ಉತ್ಸವ

krishna
Published on

ಬಂಟ್ವಾಳ: ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ 38ನೇ ವರ್ಷದ ಮೊಸರು ಕುಡಿಕೆ ಉತ್ಸವ ನಡೆಯಿತು. ಮಂದಿರದ ಅರ್ಚಕ ಮೋಹನ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿ, ಆಟೋಟ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಮಧ್ಯಾಹ್ನ ಭವ್ಯ ಶೋಭಾಯಾತ್ರೆ ಮಂದಿರದಿಂದ ಆರಂಭಗೊಂಡು ಅಮ್ಟೂರು ಪೊಯ್ಯಕಂಡ, ನೆತ್ತಿಕಲ್ಲು ತನಕ ಸಾಗಿ ಅಮ್ಟೂರು ಮೈದಾನದಲ್ಲಿ ಸಮಾಪನಗೊಂಡಿತು.

ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸಕ ಜಯಾನಂದ ಪೆರಾಜೆ ಉಪನ್ಯಾಸ ನೀಡಿದರು. ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಆಡಳಿತ ಟ್ರಸ್ಟ್ ಗೌರವಾಧ್ಯಕ್ಷ ಸಂಜೀವ ಅಮ್ಟೂರು ಅಧ್ಯಕ್ಷತೆ ವಹಿಸಿದ್ದರು. ಮಂದಿರದ ಅಧ್ಯಕ್ಷ ರಮೇಶ್ ಕರಿಂಗಾಣ, ಜ್ಯೋತಿ ಮಹಿಳಾ ಮಂಡಳದ ಅಧ್ಯಕ್ಷೆ ಲಕ್ಷ್ಮೀ ವಿ.ಪ್ರಭು ಉಪಸ್ಥಿತರಿದ್ದರು. ಮಂದಿರದ ಪ್ರಧಾನ ಕಾರ್ಯದರ್ಶಿ ಕುಶಾಲಪ್ಪ ಅಮ್ಟೂರು ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ಕಾರ್ಯದರ್ಶಿ ಶೇಖರ ಕೊಟ್ಟಾರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net