ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ

kushalakarmi
Published on

ಧಾರವಾಡ: ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕೈಗಾರಿಕಾ ವಿಭಾಗದಿಂದ 2023-24ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯಡಿ ಗ್ರಾಮೀಣ ಭಾಗದ ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳಾದ ಹೊಲಿಗೆಯಂತ್ರ, ಬಡಗಿತನ ಉಪಕರಣ ಹಾಗೂ ಗೌಂಡಿ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.

ಹೊಲಿಗೆ ವೃತ್ತಿ ಉಪಕರಣಗಳಿಗೆ ಗ್ರಾಮೀಣ ಭಾಗದ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು. ಬಡಿಗತನ ಮತ್ತು ಗೌಂಡಿ ವೃತ್ತಿ ಮಾಡುತ್ತಿರುವ ಗ್ರಾಮೀಣ ಭಾಗದ ಪುರುಷ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು ತಾಲೂಕು ಮಟ್ಟದಲ್ಲಿ ಕೈಗಾರಿಕಾ ವಿಸ್ತರಣಾಧಿಕಾರಿಗಳಿಂದ ಜು. 20ರಿಂದ ಆ. 5ರೊಳಗೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆ. 21ರೊಳಗೆ ಆಯಾ ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net