ಕುಡಿದು ವಿದ್ಯಾರ್ಥಿನಿಯರನ್ನು ಚುಡಾಯಿಸಿದಾತನಿಗೆ ಸಾರ್ವಜನಿಕರಿಂದ ಬಿತ್ತು ಗೂಸಾ..

Public
Published on

ಬೆಳಗಾವಿ: ನಗರದಲ್ಲಿ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಕುಡುಕನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಕ್ಲಬ್ ರಸ್ತೆಯ ನೀರಾವರಿ ಇಲಾಖೆಯ ಕಚೇರಿ ಎದುರು ಶುಕ್ರವಾರ ನಡೆದಿದೆ.

ಕ್ಲಬ್ ರಸ್ತೆಯಲ್ಲಿ ನೀರಾವರಿ ಇಲಾಖೆ, ಕಮರ್ಷಿಯಲ್ ಕಾಂಪ್ಲೆಕ್ಸ್, ಉತ್ತರ ವಲಯ ಐಜಿಪಿ ನಿವಾಸ, ತೋಟಗಾರಿಕೆ ಇಲಾಖೆ, ಜಿಲ್ಲಾಸ್ಪತ್ರೆ, ಜ್ಯೋತಿ ಕಾಲೇಜು ಇದೆ. ಹಿರಿಯ ಅಧಿಕಾರಿಗಳು ಮಾತ್ರವಲ್ಲದೆ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಸಾಮಾನ್ಯ ಜನರು ಸಂಚರಿಸುತ್ತಾರೆ. ಇಂಥ ಸ್ಥಳದಲ್ಲಿ ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಕುಡುಕನಿಗೆ ಸಾರ್ವಜನಿಕರು ಥಳಿಸಿದ್ದಾರೆ.

ವಾಹನ ದಟ್ಟನೆ ಕಂಡ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಪಟ್ಟರೂ ಕುಡಿದ ಮತ್ತಿನಲ್ಲಿದ್ದ ಕುಡುಕ ಅವರೊಂದಿಗೆ ವಾಗ್ವಾದ ಮಾಡಿದ್ದಾನೆ. ಸ್ಥಳೀಯರ ಸಹಕಾರದಿಂದ ಸಂಚಾರ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net