ಅಂಗನವಾಡಿ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ

29 M.D.R.1
Published on

ಮದ್ದೂರು: ತಾಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ಅಂಗನವಾಡಿ ಛಾವಣಿ ಕಳಚಿ ಬಿದ್ದ ಹಿನ್ನೆಲೆಯಲ್ಲಿ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ಕಳಚಿ ಬಿದ್ದ ಅಂಗನವಾಡಿ ಕೊಠಡಿ ಛಾವಣಿ ಶೀರ್ಷಿಕೆಯಡಿ ಬುಧವಾರ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಸಿಡಿಪಿಒ ಚೇತನ್‌ಕುಮಾರ್, ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಡಿಗೆಗೆ ಮನೆ ತೆಗೆದುಕೊಂಡು ಮಕ್ಕಳಿಗೆ ಅನುಕೂಲ ಮಾಡಿಕೊಟ್ಟರು. ಅನುದಾನ ಬಂದ ನಂತರ ಹೊಸ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net