ಶ್ರದ್ಧಾ ಭಕ್ತಿಯಿಂದ ಜರುಗಿದ ವಾರ್ಷಿಕೋತ್ಸವ

kanchikamakshi temple
Published on

ಮಡಿಕೇರಿ: ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ೧೭ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ಶನಿವಾರ ಜರುಗಿತು.


ಕೇರಳದ ಪಯ್ಯನೂರ್‌ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಿತು. ಶುಕ್ರವಾರ ಸಂಜೆ ೬ ಗಂಟೆಗೆ ಆಚಾರ್ಯರು ಆಗಮಿಸಿ ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ ಮಾಡಿದರು.


ಶನಿವಾರ ಬೆಳಿಗ್ಗೆ ೭ ಗಂಟೆಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾ ಪೂಜೆ ನೆರವೇರಿತು. ಮಧ್ಯಾಹ್ನ ಅನ್ನದಾನ ನೆರವೇರಿತು. ನಗರದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ತೀರ್ಥ ಪ್ರಸಾದವನ್ನು ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net