ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಉತ್ಸವ

pattadamma
Published on

ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಬೇಳೂರು ಬಸವನಹಳ್ಳಿ ಕಾರೇಕೊಪ್ಪ ಗ್ರಾಮದ ಶ್ರೀ ಪಟ್ಟದಮ್ಮ ದೇವಾಲಯದಲ್ಲಿ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.


ಮುಂಜಾನೆಯಿಂದಲೇ ಗಣಪತಿ ಹೋಮ, ಅಭಿಷೇಕ, ಅಲಂಕಾರ ಪೂಜೆ, ಕಳಸ ಪೂಜೆ ಹಾಗೂ ಲಲಿತಾ ಸಹಸ್ರನಾಮ ಜರುಗಿತು. ಮಧ್ಯಾಹ್ನ ಮಹಾಪೂಜೆ ಮತ್ತು ಮಹಾ ಮಂಗಳಾರತಿ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net