ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಉತ್ಸವ

uthsava
Published on

ಮಡಿಕೇರಿ: ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವಿರಾಜಪೇಟೆ ಶಿವಕೇರಿಯ ಶ್ರೀ ಆದಿ ದಂಡಿನ ಮಾರಿಯಮ್ಮ ಮತ್ತು ಶ್ರೀ ಚಾಮುಂಡಿ(ಚೌಂಡಿ)ದೇವರ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.


ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ದೇವಾಲಯದಲ್ಲಿ ಮುಂಜಾನೆಯಿಂದ ಗಣಪತಿ ಹೋಮ, ಕಳಸ ಪೂಜೆ, ದೇವಿಗೆ ಹೂವಿನ ಅಲಂಕಾರ ನೆರವೇರಿತು. ನಂತರ ಮಹಾಪೂಜೆ ಮತ್ತು ಮಂಗಳಾರತಿ ಜರುಗಿತು.


ಅಪರಾಹ್ನ ವಿರಾಜಪೇಟೆಯ ಮುಖ್ಯಬೀದಿಯಲ್ಲಿ ಅಲಂಕೃತ ಮಂಟಪದೊಂದಿಗೆ ದೇವರ ಪಲ್ಲಕ್ಕಿಯ ಮೆರವಣಿಗೆ ನಡೆಯಿತು. ನಂತರ ತಳಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ಬಳಿಕ ದೇವಿಗೆ ಆರತಿ ಪೂಜೆ, ಮಹಾಪೂಜೆ ಹಾಗೂ ಮಂಗಳಾರತಿ ನೆರವೇರಿತು.


ಮೇ೧೨ ರಂದು ಮಧ್ಯಾಹ್ನ ೩ ಗಂಟೆಗೆ ಗುಳಿಗನ ಪೂಜೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಸಮಿತಿಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net