ಪ್ರಕರಣ ಮುಚ್ಚಿಹಾಕಲು ಯತ್ನ

KT Shivakumar sene
Published on

ಚಿತ್ರದುರ್ಗ: ಕವಾಡಿಗರಹಟ್ಟಿ ಪ್ರಕರಣವನ್ನು ಕಾಲರಾ ಎಂಬ ಕಾರಣ ನೀಡಿ ರಾಜ್ಯ ಸರ್ಕಾರ ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಕರುನಾಡ ವಿಜಯಸೇನೆ ಜಿಲ್ಲಾ ಅಧ್ಯಕ್ಷ ಕೆ.ಟಿ.ಶಿವಕುಮಾರ್ ದೂರಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ಈ ಪ್ರಕರಣವನ್ನು ಆ. 22ರೊಳಗೆ ಸಿಬಿಐಗೆ ವಹಿಸದಿದ್ದರೆ, ಸೇನೆಯ ಹೋರಾಟ ತೀವ್ರಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಸಿಎಂ ಅವರು ಈ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ, ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಸೇರಿ ಸೇನೆಯ 14 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಈವರೆಗೆ ಮುಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದು, ನೊಂದವರ ಬೆನ್ನೆಲುಬಾಗಿ ನಿಂತು ಹೆಚ್ಚಿನ ನೆರವು ನೀಡಬೇಕು. ಇಲ್ಲದಿದ್ದರೆ, ಹೋರಾಟ ಅನಿವಾರ್ಯ ಎಂದರು.

ಸೇನೆಯ ಮಹಿಳಾ ಜಿಲ್ಲಾ ಅಧ್ಯಕ್ಷೆ ವೀಣಾ ಗೌರಣ್ಣ, ಕಾರ್ಯದರ್ಶಿ ಜಗದೀಶ್, ಉಪಾಧ್ಯಕ್ಷ ಕೋಟೇಶ್, ಮಣಿಕಂಠ, ಅವಿನಾಶ್, ಮಂಜುನಾಥ್, ನಾಗರಾಜ್ ಮುತ್ತು, ಅಖಿಲೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net