ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ

An attempt to destabilize the government
ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದನ್ನು ಖಂಡಿಸಿ ವಿಜಯಪುರದಲ್ಲಿ ರಾಜ್ಯ ದಲಿತ ಸಂರ್ಷ ಸಮಿತಿ ಕಾರ್ಯಕರ್ತರು ಅರೆ ಬೆತ್ತಲೆ ಮರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ, ಸಿದ್ದು ರಾಯಣ್ಣವರ, ವೈ.ಸಿ. ಮಯೂರ ಮತ್ತಿತರರಿದ್ದಾರೆ.
Published on

ವಿಜಯಪುರ: ಸಾಂವಿಧಾನಿಕ ಸಂಸ್ಥೆಳಾದ ಈಡಿ, ಐಟಿ, ಸಿಬಿಐ ಮತ್ತು ರಾಜಭವನಗಳನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂರ್ಷ ಸಮಿತಿ (ಡಾ. ಡಿ.ಜಿ. ಸಾಗರ ಬಣ) ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಅರೆ ಬೆತ್ತಲೆ ಮರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇಲ್ಲಿನ ಡಾ. ಬಿ.ಆರ್​. ಅಂಬೇಡ್ಕರ್​ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ೂಷಣೆ ಮೊಳಗಿಸಿದರು. ನಂತರ ಹೊರಟ ಮೆರವಣಿಗೆ ಗಾಂಧಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಟಿ. ಭೂಬಾಲನ್​ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಸಮಿತಿ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಲ್ಲಿ ದೇಶದ ಅಖಂಡತೆಗೆ ಧಕ್ಕೆ ತಂದೊಡ್ಡಲು ಸಂವಿಧಾನ ಪ್ರಜಾಪ್ರಭುತ್ವಕ್ಕೆ ಅಪಚಾರ ಎಸಗುತ್ತಿದೆ. ಹಲವು ರಾಜ್ಯಗಳಲ್ಲಿ ಬಿಜೆಪಿಯೇತರರ ಇತರೆ ಪಕ್ಷದ ಸರ್ಕಾರಗಳು ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದರೂ ಕೂಡ ಏನಾದರೂ ಮಾಡಿ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಮಾಡುತ್ತಿದೆ. ಅಲ್ಲದೆ, ಶಾಸಕರನ್ನು ಪುಸಲಾಯಿಸಿ ಅವರಿಗೆ ರಾಜೀನಾಮೆ ಕೊಡಿಸುತ್ತಿದೆ. ಅದಕ್ಕೆ ಒಪ್ಪದಿದ್ದರೇ, ಸಾಂವಿಧಾನಿಕ ಸಂಸ್ಥೆಗಳಾದ ಈಡಿ, ಐಟಿ ಮತ್ತು ಸಿಬಿಐ ಮತ್ತು ರಾಜಭವನಗಳು ರಾಜಪಾಲರ ಅಧಿಕಾರ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದರು.

ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ ಮಾತನಾಡಿದರು. ದಲಿತ ವಿದ್ಯಾರ್ಥಿ ಒಕ್ಕೂಟ ಜಿಲ್ಲಾ ಸಂಚಾಲಕ ವೈ.ಸಿ. ಮಯೂರ, ರಮೆಶ ದರಣಾಕರ, ಮಹಾಂತೇಶ ಸಾಸಾಬಾಳ, ಶರಣಗೌಡ ಪಾಟೀಲ, ಅಖಿಲ ಭಾರತೀಯ ವಾಲ್ಮೀಕಿ ಸೇವಾ ಸಂದ ಜಿಲ್ಲಾಧ್ಯಕ್ಷ ವಿಜಯ ಕಾಂಬಳೆ, ಅರುಣ ಗವಾರಿ, ರಮೇಶ ನಿಂಬಾಳಕರ, ಬಾಬು ಗುಣಮಿ, ರಾಮಚಂದ್ರ ದೊಡಮನಿ, ಪ್ರಶಾಂತ ತೊರವಿ, ಜೈಭೀಮ ತಳಕೇರಿ, ಜಾನು ಗುಡಿಮನಿ, ಚೇತನ ರಾಯಣ್ಣವರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net