ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

HYR KAVERI (1)
Published on

ಹಿರಿಯೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರವೇ ಕಾರ್ಯಕರ್ತರು ಬುಧವಾರ ನಗರದಲ್ಲಿ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಪಕ್ಷಾತೀತವಾಗಿ ಎಲ್ಲರೂ ಒಗ್ಗೂಡಿ ನಾಡು-ನುಡಿ, ಜಲ, ಭಾಷೆ ರಕ್ಷಣೆಗೆ ಸ್ವಾಭಿಮಾನಿ ಕನ್ನಡಿಗರು ಹೋರಾಟ ಮಾಡಬೇಕಾಗಿದೆ, ಕೇಂದ್ರ ಸರ್ಕಾರ ತಕ್ಷಣ ರಾಜ್ಯದ ವಾಸ್ತವ ಪರಿಸ್ಥಿತಿ ಅವಲೋಕನ ಮಾಡಿ, ಕನ್ನಡಿಗರಿಗೆ ನ್ಯಾಯ ದೊರಕಿಸಬೇಕಿದೆ ಎಂದು ಒತ್ತಾಯಿಸಿದರು.

ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಕಾವೇರಿ ಹೋರಾಟಕ್ಕೆ ಬೆಂಬಲಿಸಿ ಘೋಷಣೆ ಕೂಗಿದರು. ನಂತರ ಬೃಹತ್ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ಹೃದಯ ಭಾಗದಲ್ಲಿರುವ ಅಂಚೆ ಕಚೇರಿಗೆ ನುಗ್ಗಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದರು.
ಕರವೇ ಕಾರ್ಯಕರ್ತರಾದ ರಾಮಕೃಷ್ಣ, ಜಾಕೀರ್, ಅನಿಲ್‌ಕುಮಾರ್, ತಿಮ್ಮರಾಜ್, ಮಹಮ್ಮದ್ ಸುಹೇಲ್, ಜಾಫರ್, ದಾದಾಪೀರ್,

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net