ಮಲೆನಾಡಲ್ಲಿ ಬಿಜೆಪಿ ಸಂಘಟನೆಗೆ ಸಮರ್ಥ ತಂಡ

bjp dist president T.D. Megharaj
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್
Published on

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡಿದ್ದು ಸಂಘಟನಾತ್ಮಕ ಚಟುವಟಿಕೆಗಳನ್ನು ಸಮರ್ಥವಾಗಿ ಮುಂದುವರಿಸಲು ಹಾಗೂ ಪಕ್ಷವನ್ನು ಮುನ್ನಡೆಸಲು ಮುಂದಿನ ಮೂರು ವರ್ಷದ ಅವಧಿಗೆ ಸಮರ್ಥ ತಂಡವನ್ನು ರಚಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು.

ಪ್ರಭಾರಿಯಾಗಿ ಮಾಜಿ ಶಾಸಕ ರಘುಪತಿ ಭಟ್ ಮತ್ತು ಸಂಚಾರ ಪ್ರಭಾರಿಯಾಗಿ ಶಿವಮೊಗ್ಗ ವಿಭಾಗ ಪ್ರಭಾರಿ ಗಿರೀಶ್ ಪಟೇಲ್ ಅವರನ್ನು ನಿಯೋಜಿಸಲಾಗಿದೆ. ಪ್ರತಿ ಬೂತ್ ವ್ಯಾಪ್ತಿಯಲ್ಲಿ ಗೋಡೆ ಬರಹಕ್ಕೆ ಚಾಲನೆ ನೀಡಲಾಗಿದೆ. ವಾರ್ಡ್ ವ್ಯಾಪ್ತಿಯಲ್ಲಿನ ಖಾಸಗಿ ಆಸ್ತಿ ಮಾಲೀಕರ ಅನುಮತಿ ಪಡೆದು ಪಕ್ಷದ ಸಾಧನೆಗಳನ್ನು ಬರೆಯಲಾಗುತ್ತದೆ. ಮುಖಂಡರು ಅವರವರ ಬೂತ್‌ನಲ್ಲಿ ಹಾಜರಿದ್ದು ಜ.29ರಂದು ಇದಕ್ಕೆ ಚಾಲನೆ ನೀಡುವರು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಯ 1,775 ಬೂತ್‌ಗಳಿಗೂ ವಿಸ್ತಾರಕರು ಭೇಟಿ ನೀಡಿ ಕಾರ್ಯಕ್ಷಮತೆ ಹೆಚ್ಚಿಸಲು ಶ್ರಮಿಸಲಿದ್ದಾರೆ. ಬೂತ್ ಸಮಿತಿ, ದೇವಾಲಯ ಸಮಿತಿ, ಮಹಿಳಾ ಸ್ವಸಹಾಯ ಸಂಘಗಳ ಪದಾಧಿಕಾರಿಗಳೊಂದಿಗೆ ಪ್ರಮುಖರನ್ನು ಜೋಡಿಸಿಕೊಂಡು ಸಭೆ ನಡೆಸಲಿದ್ದು ಅದಕ್ಕೆ ಜ.29ರಂದು ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.
ನಿರ್ವಹಣಾ ಸಮಿತಿಗೆ ಮಾಜಿ ಎಂಎಲ್‌ಸಿ ಆರ್.ಕೆ.ಸಿದ್ದರಾಮಣ್ಣ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ. ಅದರ ಕಚೇರಿ ಜ.29ರಂದು ಉದ್ಘಾಟನೆಗೊಳ್ಳಲಿದೆ ಎಂದರು.
ರಾಜ್ಯ ಪ್ರಕೋಷ್ಠಗಳ ಸಂಚಾಲಕ ಎಸ್.ದತ್ತಾತ್ರಿ, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್, ನಗರ ಅಧ್ಯಕ್ಷ ಎನ್.ಕೆ.ಜಗದೀಶ್, ಪ್ರಮುಖರಾದ ವಿನ್ಸೆಂಟ್ ರೋಡ್ರಿಗಸ್, ಚಂದ್ರಶೇಖರ್, ಕೆ.ವಿ.ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net