ದೌರ್ಜನ್ಯಗಳಿಗೆ ಅಂತಿಮ ಹಾಡಿ

An end to atrocities
Published on

ವಿಜಯಪುರ:ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕೊನೆ ಹಾಕಿ ಸೂಕ್ತ ಭದ್ರತೆ ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸತಿಕ ಸಂಟನೆ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಅಖಿಲ ಭಾರತ ಮಹಿಳಾ ಸಾಂಸತಿಕ ಸಂಟನೆಯು ದೇಶದಾದ್ಯಂತ ಮಹಿಳೆಯರ ಹಕ್ಕುಗಳಿಗಾಗಿ, ಮಹಿಳೆಯರ ನತೆಯ ಬದುಕಿಗಾಗಿ ಶ್ರಮಿಸುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯಾಗಿದೆ. ಅಲ್ಲದೆ, ಇತ್ತೀಚೆಗೆ 5 ವರ್ಷದ ಹೆಣ್ಣು ಮಗುವಿನ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ ನಡೆದಿದ್ದು ಇಡೀ ಜಿಲ್ಲೆಯ ಜನತೆ ತಲೆತಗ್ಗಿಸುವಂತಾಗಿದೆ. ಹಳೆಯ ಊಳಿಗಮಾನ್ಯ ವ್ಯವಸ್ಥೆಯ ಪುರುಷ ಪ್ರಧಾನ ಮೌಲ್ಯಗಳ ಜತೆಗೆ ಇಂದಿನ ಹೆಣ್ಣು ಭೋಗದ ವಸ್ತು ಎಂಬಂತೆ ಬಿತ್ತರಿಸುವ ಹುನ್ನಾರ ನಡೆದಿದ್ದು, ಅದರಿಂದ ಸಾಮಾಜಿಕ ವಾತಾವರಣದಲ್ಲಿ ಮೌಲ್ಯಗಳು ಕುಸಿಯುತ್ತಿವೆ ಎಂದು ಪ್ರತಿಭಟನಾಕಾರರು ದೂರಿದರು.

ರಾಜ್ಯದಲ್ಲಿ ಇಂದಿಗೂ ಕದ್ದು ಮುಚ್ಚಿ ನಡೆಯುತ್ತಿರುವ ಸಿ ಭ್ರೂಣ ಹತ್ಯೆಯ ಟನೆಗಳು ಸಮಾಜದಲ್ಲಿರುವ ಹಳೆಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತವೆ. 2024& 25ರ ಅವಧಿಯಲ್ಲಿ 700ಕ್ಕೂ ಹೆಚ್ಚು ಬಾಲ್ಯ ವಿವಾಹಗಳು ವರದಿಯಾಗಿವೆ. ಕಳೆದ ಮೂರು ವರ್ಷಗಳಲ್ಲಿ (2023&ಜುಲೈ 2025) 80,813 ಬಾಲ ಗರ್ಭಿಣಿ ಪ್ರಕರಣಗಳು (ಆರ್​ಸಿಎಚ್​ ಪೋರ್ಟಲ್​) ಪತ್ತೆಯಾಗಿರುವುದು ಆತಂಕ ಮೂಡಿಸಿವೆ ಎಂದರು.

ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರ ಸೂಕ್ತವಾಗಿ ಸ್ಪಂದಿಸಬೇಕಿದೆ. ಹಲವು ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ. ಕೂಡಲೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಮುಂದಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಸಂಟನೆಯ ಜಿಲ್ಲಾಧ್ಯಕ್ಷೆ ಗೀತಾ ಎಚ್​., ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗೂಳಿ, ಜಂಟಿ ಕಾರ್ಯದರ್ಶಿ ಶಿವರಂಜನಿ, ನಿವೃತ್ತ ಉಪನ್ಯಾಸಕಿ ಲಲಿತಾ ಬಿಜ್ಜರಗಿ, ಜಿಲ್ಲಾ ಸಮಿತಿ ಸದಸ್ಯರಾದ ಜ್ಯೋತಿ ಹಚಡದ ಮತ್ತಿತರರಿದ್ದರು.

ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕೊನೆಹಾಕಿ ಸೂಕ್ತ ಭದ್ರತೆ ಒದಗಿಸುವಂತೆ ಆಗ್ರಹಿಸಿ ವಿಜಯಪುರದಲ್ಲಿ ಎಐಎಂಎಸ್​ಎಸ್​ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು. ಗೀತಾ ಎಚ್​., ಶಿವಬಾಳಮ್ಮ ಕೊಂಡಗೂಳಿ, ಶಿವರಂಜನಿ ಮತ್ತಿತರರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net