

ಶಿರ್ವ: ಆಧುನಿಕ ಜಗತ್ತಿನ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಮುಖ ಪಾತ್ರವಹಿಸುತ್ತದೆ. ತಂತ್ರಜ್ಞಾನದ ಮಾಹಿತಿ ವಿದ್ಯಾರ್ಥಿಗಳು ಪಡೆದಾಗ ತನ್ನ ಶೈಕ್ಷಣಿಕ ಪ್ರಗತಿ ಜತೆಗೆ ಈ ದೇಶದ ಅಭಿವೃದ್ಧಗೆ ಪೂರಕ ಎಂದು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯ ಭೌತಶಾಸ್ತ್ರ ವಿಭಾಗ ಸಹ ಪ್ರಾಧ್ಯಾಪಕ ಡಾ.ಗುರುಮೂರ್ತಿ ಹೇಳಿದರು.
ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಭೌತಶಾಸ್ತ್ರ ವಿಭಾಗ ಐಎಸ್‌ಟಿ ವಿದ್ಯಾರ್ಥಿ ಘಟಕ ಸಹಯೋಗದೊಂದಿಗೆ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂಜಿನಿಯರಿಂಗ್ ಭೌತಶಾಸ್ತ್ರ ವಿಷಯದಲ್ಲಿ 100 ಅಂಕ ಗಳಿಸಿ ಸಾಧನೆಗೈದ ದೀಪಾ ಡಿ.ಪ್ರಭು ಅವರನ್ನು ಗೌರವಿಸಲಾಯಿತು. ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್, ಉಪ ಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಡೀನ್‌ಗಳು, ವಿವಿಧ ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ವಿದ್ಯಾರ್ಥಿನಿ ಶ್ರಾವ್ಯಾ ತಂತ್ರಿ ನಿರೂಪಿಸಿದರು.