

ಚಿಂತಾಮಣಿ: ಅಂಗನವಾಡಿ ಮತ್ತು ಶಾಲಾ ಕೊಠಡಿ ನಿರ್ಮಾಣ ಮಾಡುವ ಮೂಲಕ ಮಕ್ಕಳ ಭವಿಷ್ಯಕ್ಕಾಗಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.
ನಗರದ ಅಂಬಾಜಿದುರ್ಗದಲ್ಲಿ 3.61 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ತಾಲೂಕಿನ ನಾಯನಹಳ್ಳಿಯಲ್ಲಿ 13.9 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ಹಾಗೂ 12.6 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕಟ್ಟಡ, 20 ಲಕ್ಷ ರೂ. ವೆಚ್ಚದಲ್ಲಿ ಧನಮಿಟ್ಟೇನಹಳ್ಳಿಯಲ್ಲಿ ನಿರ್ಮಿಸಲಾಗಿರುವ ಮಾದರಿ ಅಂಗನವಾಡಿ ಕಟ್ಟಡ ಹಾಗೂ ಹುಸೇನಪುರದಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ಚೆಕ್ಡ್ಯಾಂ ಕಟ್ಟಡ ಸೇರಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದರು.
ಅಂಗನವಾಡಿ ಕಟ್ಟಡಕ್ಕೆ ನಗರ ಭಾಗದಲ್ಲಿ 20 ಲಕ್ಷ ರೂ., ಗ್ರಾಮೀಣ ಭಾಗದಲ್ಲಿ 15 ಲಕ್ಷ ರೂ. ನೀಡಲಾಗಿದೆ. ಮಾದರಿ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಧನಮಿಟ್ಟೇನಹಳ್ಳಿಯಲ್ಲಿ ನಿರ್ಮಾಣ ಮಾಡಿರುವುದು ಎಲ್ಲರನ್ನು ಆಕರ್ಷಿಸುತ್ತಿದೆ ಎಂದರು.
ಬಾಗೇಪಲ್ಲಿ ವೃತ್ತ ಮತ್ತು ಕೋಲಾರ ವೃತ್ತದ ಸಮಗ್ರ ಅಭಿವೃದ್ಧಿಗೆ ಅನುದಾನ ಮಂಜೂರು, ಟೆಂಡರ್ ಆಗಿದೆ ಎಂದ ಸಚಿವರು, ಬಾಗೇಪಲ್ಲಿ ವೃತ್ತದಿಂದ ಬಾಗೇಪಲ್ಲಿ ರಸ್ತೆಯ ರೈಲ್ವೆ ಅಂಡರ್ಪಾಸ್ವರೆಗೂ 6.5 ಕೋಟಿ ರೂ. ವೆಚ್ಚದಲ್ಲಿ ಜೋಡಿ ರಸ್ತೆ ನಿರ್ಮಾಣ ಹಾಗೂ 15 ಕೋಟಿ ರೂ. ವೆಚ್ಚದಲ್ಲಿ ಬಾಗೇಪಲ್ಲಿ ರಸ್ತೆ ಅಭಿವೃದ್ಧಿ ಮಾಡುತ್ತಿರುವುದಾಗಿ ತಿಳಿಸಿದರು.
ಮುಖಂಡರಾದ ಮಸಲಹಳ್ಳಿ ಶಿವಾರೆಡ್ಡಿ, ರವಿರೆಡ್ಡಿ, ಶ್ರೀನಿವಾಸರೆಡ್ಡಿ, ತಾತಿರೆಡ್ಡಿ, ಕೃಷ್ಣಾರೆಡ್ಡಿ, ಆಂಜನೇಯರೆಡ್ಡಿ, ನಾಗೇಶ್, ನಾಗರಾಜ್, ಶಬ್ಬೀರ್ ಅಹಮದ್, ಮೊಯಿದ್ದೀನ್, ಅಲ್ಲಾಬಕಷ್, ಪ್ರಭಾಕರ ರೆಡ್ಡಿ, ತಾಪಂ ಇಒ ಆನಂದ್, ಲೋಕೋಪಯೋಗಿ ಎಇಇ ನಾಗರಾಜ್, ಬಿಇಒ ಉಮಾದೇವಿ, ಕೃಷಿ ಇಲಾಖೆಯ ಅಮರ್ನಾರೇಯಣ್, ಜಿಲ್ಲಾ ಪಂಚಾಯಿತಿಯ ಪ್ರಸಾದ್, ಅಧಿಕಾರಿಗಳು ಸೇರಿ ಆಯಾ ಗ್ರಾಪಂ ಅಧ್ಯಕ್ಷರು, ಸದಸ್ಯರು ಇದ್ದರು.
ರೈತ ಸಂಪರ್ಕ ಕೇಂದ್ರ: ವಾಲ್ಮೀಕಿ ಭವನದ ಪಕ್ಕದಲ್ಲಿ ಒಂದು ಎಕರೆ ಜಾಗವನ್ನು ಕೃಷಿ ಇಲಾಖೆಗೆ ಕೊಟ್ಟು 2 ಕೋಟಿ ರೂ. ವೆಚ್ಚದಲ್ಲಿ ಅಂಬಾಜಿದುರ್ಗದ ರೈತ ಸಂಪರ್ಕ ಕೇಂದ್ರ ನಿರ್ಮಾಣ ಮಾಡಲು ಶಂಕುಸ್ಥಾಪನೆ ಮಾಡಲಾಗಿದೆ. ಹಲವು ಗ್ರಾಮಗಳಲ್ಲಿ ಶುದ್ಧ ನೀರಿನ ಟಕಗಳು ಸ್ಥಗಿತಗೊಂಡಿರುವ ಬಗ್ಗೆ ಡಾ.ಎಂ.ಸಿ. ಸುಧಾಕರ್ ವಿಷಾದ ವ್ಯಕ್ತಪಡಿಸಿದರು. ಕೆಲ ಗ್ರಾಮಗಳಲ್ಲಿ ಗುತ್ತಿಗೆ ಅವಧಿ ಮುಗಿದಿದ್ದರೂ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅಲ್ಲದೇ ಕೆಲವರು ಶುದ್ಧ ನೀರಿನ ಟಕದ ವಿದ್ಯುತ್ ಬಿಲ್ ಪಾವತಿ ಮಾಡದೆ ಲಾಂತರ ರೂ. ಬಾಕಿ ಉಳಿಸಿಕೊಂಡಿರುವುದೂವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಅಧಿಕಾರಿಗಳು ಸಂಪೂರ್ಣ ಮಾಹಿತಿ ಸಂಗ್ರಹಿಸುವಂತೆ ಸೂಚಿಸಲಾಗಿದೆ. ಬಾಕಿ ಬಿಲ್ ಪಾವತಿ ಮಾಡದವರ ವಿರುದ್ಧ ಕಾನೂನು ಕ್ರಮ ವಹಿಸಲು ಸೂಚಿಸಿದ್ದು, ಹಾಳಾಗಿರುವ ಶುದ್ಧ ನೀರಿನ ಟಕಗಳ ದುರಸ್ತಿ ಮಾಡಲಾಗುವುದು ಎಂದು ತಿಳಿಸಿದರು.