ಪುಸ್ತಕ ಓದಿ ವಿಮರ್ಶಿಸುವ ವಿನೂತನ ಕಾರ್ಯಕ್ರಮ

28sunti02
ಸುಂಟಿಕೊಪ್ಪದ ಮಂಜಿಕೆರೆ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂದ ಪದಾಧಿಕಾರಿಗಳು ಪುಸ್ತಕ ಓದಿ ವಿಮರ್ಶೆ ಮಾಡಿದರು.
Published on

ಸುಂಟಿಕೊಪ್ಪ: ಪ್ರತಿಯೊಬ್ಬ ವ್ಯಕ್ತಿಯೂ ಪುಸ್ತಕವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಇದರಿಂದ ವ್ಯಕ್ತಿಯ ವ್ಯಕ್ತಿತ್ವ ವಿಕಾಸನಗೊಳಿಸುತ್ತದೆ ಈ ದಿಸೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಪುಸ್ತಕಗಳನ್ನು ಓದುವ ಹವ್ಯಾಸ ಮಾಡುವ ನಿಟ್ಟಿನಲ್ಲಿ ಯೋಜನೆಯ ವತಿಯಿಂದ ಪುಸ್ತಕ ಓದಿ ವಿಮರ್ಶೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಾಲಿನಿ ಹೇಳಿದರು.

ಮಂಜಿಕೆರೆ ಸಮುದಾಯ ಭವನದಲ್ಲಿ ಕಾನ್‌ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ಕಾನ್‌ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಪುಸ್ತಕ ವಾಚನ-ವಿಮರ್ಶೆ ಸಮಾರಂಭದಲ್ಲಿ ಮಾತನಾಡಿ, ಇಂದಿನ ದಿನಗಳಲ್ಲಿ ನಾವು ಪುಸ್ತಕಗಳನ್ನು ಓದುವ ಹವ್ಯಾಸದಿಂದ ದೂರ ಉಳಿಯುತ್ತಿದ್ದೇವೆ. ಇದರಿಂದ ನಮ್ಮ ಜ್ಞಾನ ಕುಂಠಿತಗೊಳ್ಳುತ್ತಿದೆ. ನಾವು ನಿತ್ಯ ಪುಸ್ತಕಗಳನ್ನು ಓದುವುದರಿಂದ ಜ್ಞಾನ ಬೆಳೆಸಿಕೊಳ್ಳಬಹುದಾಗಿದೆ. ವಿಶ್ರಾಂತಿ ಸಮಯದಲ್ಲಿ ಪುಸ್ತಕಗಳನ್ನು ವಾಚಿಸುವ ಆಭ್ಯಾಸವನ್ನು ರೂಢಿಸಿಕೊಳ್ಳುವಂತೆ ಕರೆ ನೀಡಿದರು.

ಜನನಿ ತಂಡದ ಸದಸ್ಯೆ ರತ್ನಾ ಅಧ್ಯಕ್ಷತೆ ವಹಿಸಿದ್ದರು. ಸ್ಥಳದಲ್ಲಿ ನೆರೆದಿದ್ದ ಸದಸ್ಯರಿಗೆ ಪುಸ್ತಕಗಳನ್ನು ವಿತರಿಸಿ, ವಾಚಿಸಲಾಯಿತು. ಪುಸ್ತಕದಲ್ಲಿ ವಾಚಿಸಿದ ವಾಕ್ಯಗಳನ್ನು ಆರಿಸಿಕೊಂಡು ವಿಮರ್ಶೆಯನ್ನು ಮಾಡಿಸುವ ಮೂಲಕ ವಿಜೇತರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಕಾನ್‌ಬೈಲ್ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳಾದ ಜನನಿ, ಭೂಮಿಕ, ಕನ್ನಿಕ, ಭಗವತಿ ಹಾಗೂ ಧೃತಿ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಖತ್ತೀಜ, ಕಾನ್‌ಬೈಲ್ ವ್ಯಾಪ್ತಿಯ ಸೇವಾ ಪ್ರತಿನಿಧಿ ಯಶೋದಾ ಬಸವರಾಜ್, ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net