

ಗುಳೇದಗುಡ್ಡ: ಡಾ. ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ತಳಹದಿಯ ಮೇಲೆ ಸಂವಿಧಾನಾತ್ಮಕ ಹಕ್ಕುಗಳನ್ನು ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಎಲ್ಲರಿಗೂ ದೊರಕಿಸಿದ್ದಾರೆ. ಭಾರತದ ಪ್ರತಿಯೊಬ್ಬ ಪ್ರಜೆಯೂ ಅವರಿಗೆ ಋಣಿಯಾಗಿರಬೇಕು ಎಂದು ತಹಸೀಲ್ದಾರ್ ಮಂಗಳಾ ಎಂ. ಹೇಳಿದರು.
ಪಟ್ಟಣದ ಶಿವಕೃಪಾ ರಂಗಮಂದಿರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನದ ಅಂಗವಾಗಿ ತಾಲೂಕು ಆಡಳಿತ, ತಾಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 134ನೇ ಜನ್ಮದಿನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಅಸ್ಪಶ್ಯತೆ ವಿರುದ್ಧ ಹೋರಾಡಿ ಶೋಷಿತರಿಗೆ ನ್ಯಾಯ ಒದಗಿಸಿ ಸಮಾಜದಲ್ಲಿ ಎಲ್ಲರೂ ಸಮಾನವಾಗಿ ಬದುಕಬೇಕು ಎಂದು ಕನಸು ಕಂಡಿದ್ದರು. ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡುವಲ್ಲಿ ಪ್ರಮುಖಪಾತ್ರ ವಹಿಸಿದ ಅವರ ಮಾರ್ಗದಲ್ಲಿ ನಾವೆಲ್ಲ ನಡೆಯಬೇಕು ಎಂದರು.
ಪ್ರೊ. ಸಣ್ಣವೀರಣ್ಣ ದೊಡಮನಿ ಉಪನ್ಯಾಸ ನೀಡಿದರು. 2023-24ನೇ ಸಾಲೀನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪುರಸಭೆ ಉಪಾಧ್ಯಕ್ಷ ರಾಜಶೇಖರ ಹೆಬ್ಬಳ್ಳಿ, ತಾಪಂ ಇಒ ಮಲ್ಲಿಕಾರ್ಜುನ ಬಡಿಗೇರ, ಪುರಸಭೆ ಮಾಜಿ ಅಧ್ಯಕ್ಷ ವೈ.ಆರ್. ಹೆಬ್ಬಳ್ಳಿ, ಸದಸ್ಯರಾದ ಯಲ್ಲಪ್ಪ ಮನ್ನಿಕಟ್ಟಿ, ವಿನೋದ ಮದ್ದಾನಿ, ಪುರಸಭೆ ಮುಖ್ಯಾಧಿಕಾರಿ ಎ.ಎಚ್. ಮುಜಾವರ, ಸಮಾಕಲ್ಯಾಣ ಇಲಾಖೆ ಅಧೀಕ್ಷಕ ಸಂಜೀವ ಮಬ್ರುಮಕರ, ಯಮನಪ್ಪ ದಳಪತಿ, ಕೀರಪ್ಪ ತಳವಾರ, ಹಿರಿಯಪ್ಪ ಮಾದರ, ಪರಶುರಾಮ ಮಾದರ, ಶಂಕ್ರಪ್ಪ ಹುಲಮನಿ, ರಾಮಣ್ಣ ಚಂದರಗಿ, ಪಿ.ಆರ್. ಚವ್ಹಾಣ, ಬಸವರಾಜ ಬಂಡಿವಡ್ಡರ, ರಮೇಶ ಗಚ್ಚಿನಮನಿ, ಬಸವರಾಜ ಕಳ್ಳಿಗುಡ್ಡ, ಶ್ರೀಕಾಂತ ಹುನಗುಂದ, ಎಂ.ಎಸ್. ಮದರಂಗಿ ಮತ್ತಿತರರಿದ್ದರು.