

ಲಕ್ಷ್ಮೇಶ್ವರ: ತಾಲೂಕಿನ ಗೋವನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಂಜನಗೌಡ ನಿಂಗನಗೌಡ ಕೆಂಚನಗೌಡ್ರ ಮತ್ತು ಉಪಾಧ್ಯಕ್ಷೆಯಾಗಿ ನಿರ್ಮಲಾ ಚಂದ್ರಶೇಖರ ತಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
8 ಸದಸ್ಯ ಸ್ಥಾನಗಳನ್ನು ಹೊಂದಿರುವ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಅ ವರ್ಗದ ಮಹಿಳೆಗೆ ಮೀಸಲಾಗಿತ್ತು. ಶುಕ್ರವಾರ ಚುನಾವಣೆ ನಿಗದಿಯಾಗಿತ್ತು. ಇಬ್ಬರು ಸದಸ್ಯರು ಗೈರಾಗಿದ್ದರು. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಎಂ.ಎಂ ಹವಳದ ಅವರು ಅವಿರೋಧ ಆಯ್ಕೆ ಘೋಷಿಸಿದರು.
ಗ್ರಾಪಂ ಸದಸ್ಯರಾದ ಸುಶೀಲವ್ವ ಮರಿಲಿಂಗನಗೌಡ್ರ, ಸುಧಾ ಮಾದರ, ಅಣ್ಣಪ್ಪ ರಾಮಗೇರಿ, ಕರಿಯಪ್ಪಗೌಡ ಹೊಸಗೌಡ್ರ ಇತರರಿದ್ದರು.