ದುರಸ್ತಿಗೊಳ್ಳದ ತಡೆಗೋಡೆ

14 HANUR 5
ಮಲೆ ಮಹದೇಶ್ವರ ಬೆಟ್ಟದ ಆನೆತಲೆ ದಿಂಬದ ಬಳಿ ದುರಸ್ತಿಗೊಂಡಿರುವ ತಡೆಗೋಡೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿರುವುದು.
Published on

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಆನೆತಲೆ ದಿಂಬದ ಬಳಿಯ ತಡೆಗೋಡೆ ರಿಪೇರಿ ಮಾಡದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಭಕ್ತರು ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶವ್ಯಕ್ತಪಡಿಸಿದ್ದಾರೆ.

2 ವರ್ಷದ ಹಿಂದೆ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕರಿಕಲ್ಲು ತುಂಬಿದ ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ಕೆಳ ಭಾಗ ರಸ್ತೆಗೆ ಉರುಳಿ ಬಿದ್ದಿತ್ತು. ಆದರೆ ಈವೆರಗೂ ದುರಸ್ತಿಗೆ ಕ್ರಮವಹಿಸಿಲ್ಲ. ಇದರಿಂದ ಬೇಸತ್ತ ಭಕ್ತರು ಶ್ರೀ ಮಲೆ ಮಹದೇಶ್ವರ ಭಕ್ತ ಸಮೂಹ ಹಾಗೂ ಶ್ರೀ ಮಲೆ ಮಹದೇಶ್ವರ ಸ್ವಾಮಿ ಭಕ್ತ ವೃಂದ ಹನೂರು ಕ್ಷೇತ್ರ ಫೇಸ್‌ಬುಕ್ ಖಾತೆಯಲ್ಲಿ ದುರಸ್ತಿಗೊಂಡಿರುವ ತಡೆಗೋಡೆಯ ಬಳಿ ಅಪಾಯದ ಸ್ಥಿತಿಯಲ್ಲಿ ಬಸ್ ಸಂಚರಿಸುವ ವಿಡಿಯೋವನ್ನು ಹರಿಬಿಟ್ಟಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮ.ಬೆಟ್ಟ ಪ್ರಸಿದ್ಧ ಧಾರ್ಮಿಕ ಪುಣ್ಯ ಕ್ಷೇತ್ರ. ಈ ಮಾರ್ಗದಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಆದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನಾದರೂ ತಡೆಗೋಡೆ ಸರಿಪಡಿಸುವಂತೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net