ಕುಕ್ಕೆ ಕ್ಷೇತ್ರಕ್ಕೆ ಆನಂದ ಗುರೂಜಿ ಭೇಟಿ

14
Published on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಆನಂದ ಗುರೂಜಿ ಮಂಗಳವಾರ ಭೇಟಿ ನೀಡಿದರು.

ಶ್ರೀ ದೇವರ ದರುಶನ ಪಡೆದ ಅವರಿಗೆ ದೇಗುಲದ ಅರ್ಚಕರು ಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರುಶನ ಮಾಡಿ ಪ್ರಸಾದ ಸ್ವೀಕರಿಸಿ, ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು. ಸ್ವಾಮೀಜಿಗಳು ಆನಂದ ಗುರೂಜಿ ಅವರಿಗೆ ಮಂತ್ರಾಕ್ಷತೆ ನೀಡಿದರು.

ಘಾಟಿ ಸುಬ್ರಹ್ಮಣ್ಯ ದೇಗುಲದ ಅರ್ಚಕ ಗುರುರಾಜ ಶರ್ಮ, ಕುಕ್ಕೆ ದೇಗುಲದ ಕಚೇರಿ ಅಧೀಕ್ಷಕ ಕೆ.ಎಂ.ಗೋಪಿನಾಥ್ ನಂಬೀಶ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net