

ಕಾರ್ಕಳ: ಪ್ರತಿಷ್ಟಿತ ಇಂಡಿಯನ್ ಇನ್ಸ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅನಂತ್ ಎನ್.ಕೆ. ಸಾವಾನ್ಯ ವಿಭಾಗದಲ್ಲಿ 11072ನೇ ರ್ಯಾಂಕ್ ಪಡೆದಿದ್ದಾರೆ.
ಇದಕ್ಕೂ ಮೊದಲು ನಡೆದ ಜೆಇಇ ಮೈನ್ ಪರೀಕ್ಷೆಯಲ್ಲಿ 99.6912 ಪರ್ಸೆಂಟೈಲ್ ಪಡೆದುಕೊಂಡಿದ್ದರು. ಕೆಸಿಇಟಿ ಫಲಿತಾಂಶದಲ್ಲಿ ಇಂಜಿನಿಯರಿಂಗ್ನಲ್ಲಿ ರಾಜ್ಯಮಟ್ಟದಲ್ಲಿ 57ನೇ ರ್ಯಾಂಕ್ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ 593 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿದ್ದರು. ವಿದ್ಯಾರ್ಥಿಯ ಸಾಧನೆಗೆ ಕ್ರೈಸ್ಟ್ಕಿಂಗ್ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದಿಸಿದ್ದಾರೆ.