ನೇಣು ಬಿಗಿದು ಆತ್ಮಹತ್ಯೆಗೆ ಯತ್ನ - ಪತಿ ಸಾವು, ಪತ್ನಿ ಗಂಭೀರ

Published on

ವಿಟ್ಲ: ಅನಂತಾಡಿಯ ಬಾಕಿಲದಲ್ಲಿ ಪತಿ ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟು ಪತ್ನಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಂತಾಡಿ ಬಾಕಿಲ ನಿವಾಸಿ ಪ್ರತಾಪ್ (35) ಮೃತಪಟ್ಟಿದ್ದು, ವೀಣಾ (32) ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರಿಗೆ ವರ್ಗಾಯಿಸಲಾಗಿದೆ. ಶನಿವಾರ ರಾತ್ರಿ ನೇಣುಬಿಗಿದುಕೊಂಡು ತಕ್ಷಣ ಮಾಹಿತಿ ತಿಳಿದು ಇಬ್ಬರನ್ನೂ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಾಪ್ ಮೃತಪಟ್ಟಿರುವುದನ್ನು ವೈದ್ಯರು ದೃಢೀರಿಸಿದ್ದು, ಪತ್ನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾಯಿಸಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net