ಅರಾಜಕತೆ ತಡೆಯುತ್ತಿವೆ ಪತ್ರಿಕೆಗಳು

20 KOTTUR 01
ಕೊಟ್ಟೂರಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ನೇಮಿರಾಜ್ ನಾಯ್ಕ ಉದ್ಘಾಟಿಸಿದರು. ಜಿಪಂ ಮಾಜಿ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ, ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸತ್ಯನಾರಾಯಣ, ಜಿಪಂ ಮಾಜಿ ಉಪಾಧ್ಯಕ್ಷ ದೊಡ್ಡ ರಾಮಣ್ಣ, ದೇವರಮನಿ ಸುರೇಶ ಇತರರಿದ್ದರು.
Published on

ಕೊಟ್ಟೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ವೆಚ್ಚ ಮಾಡುವ ಬದಲು ರೈತರಿಗೆ ಉಚಿತ ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ಸಾಮಾಗ್ರಿಗಳನ್ನು ಕೊಟ್ಟರೆ ಕೃಷಿ ಕ್ಷೇತ್ರ ಅಭಿವೃದ್ಧಿಯಾಗಲಿದೆ ಎಂದು ಶಾಸಕ ನೇಮಿರಾಜ್ ನಾಯ್ಕ ಹೇಳಿದರು.

ಪಟ್ಟಣದ ಚಾನುಕೋಟಿ ಮಠದ ಸಭಾಂಗಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪತ್ರಿಕೆಗಳು ಅನ್ಯಾಯ ಅರಾಜಕತೆಯನ್ನು ತಡೆಯುತ್ತಿವೆ. ನಿವೃತ್ತರಾಗುವ ಪತ್ರಕರ್ತರಿಗೆ 10 ಸಾವಿರ ರೂ. ಮಾಸಾಶನ ನೀಡುವುದರೊಂದಿಗೆ ಇತರ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಜಿಪಂ ಮಾಜಿ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ ಮಾತನಾಡಿ, ಪತ್ರಕರ್ತರು ವಸ್ತುನಿಷ್ಠ ಹಾಗೂ ಪಾರದರ್ಶಕವಾಗಿ ವರದಿ ಮಾಡಬೇಕು. ಪ್ರಲೋಭನೆಗೆ ಒಳಗಾಗಿ ವರದಿ ಮಾಡಬಾರದು. ಸಮಾಜವನ್ನು ತಿದ್ದುವ ಶಕ್ತಿ ಪತ್ರಿಕೆಗಳಿಗೆ ಇದೆ ಎಂದರು.

ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಪತ್ರಕರ್ತ ಉಜ್ಜಿನಿ ರುದ್ರಪ್ಪ, ಜಿ.ಸೋಮಶೇಖರ, ಕ್ರೀಡಾ ಪಟುಗಳಾದ ಕೊಟ್ರೇಶ, ಪ್ರತಿಕ್ಷಾ ಅವರನ್ನು ಸನ್ಮಾನಿಸಲಾಯಿತು. ಪ್ರಾಧ್ಯಾಪಕ ಡಾ.ಸತೀಶ ಪಾಟೀಲ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸತ್ಯನಾರಾಯಣ, ಜಿಪಂ ಮಾಜಿ ಉಪಾಧ್ಯಕ್ಷ ಪಿ.ಎಚ್.ದೊಡ್ಡರಾಮಣ್ಣ, ಬದ್ದಿ ಮರಿಸ್ವಾಮಿ, ವಿಕ್ರಂ, ಎಪಿಎಂಸಿ ಅಧ್ಯಕ್ಷ ಹರಾಳು ನಂಜಪ್ಪ, ಜಿಲ್ಲಾ ಕಾರ್ಯದರ್ಶಿ ಕೆ.ಲಕ್ಷ್ಮಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net