ಆಂದ್ರ ಶಾಸಕನ ಕಾರು ಅಪಘಾತಕ್ಕೆ ಟ್ರ್ಯಾಕ್ಟರ್​ ಚಾಲಕ ಬಲಿ: ಕಾರಿನಲ್ಲಿದ್ದವರು ಪರಾರಿ

Accident
Published on

ಕೋಲಾರ: ಆಂದ್ರಪ್ರದೇಶದ ಶಾಸಕನ ಕಾರು ಟ್ರಾಕ್ಟರ್‌ಗೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಮಡಕಸಿರ ಶಾಸಕ ತಿಪ್ಪ ಸ್ವಾಮಿಗೆ ಸೇರಿದ ಕಾರು ಇದಾಗಿದೆ ಎಂದು ತಿಳಿದುಬಂದಿದೆ. ಇನ್ನು ಘಟನೆ ನಡೆದ ಕೂಡಲೇ ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ಕಾಂತರಾಜ ವೃತ್ತದಲ್ಲಿ ಮಂಗಳವಾರ ಮುಂಜಾನೆ 11 ಗಂಟೆ ಸುಮಾರಿಗೆ ಶಾಸಕನ ಕಾರು ಅಪಘಾತವಾಗಿದೆ. ಈ ವೇಳೆ ಕಾರು ಚಾಲಕನಿಗೆ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರು ಚಾಲಕ ಕಾರನ್ನು ಬಿಟ್ಟು ಪರಾರಿಯಾಗಿದ್ದು, ಕಾರಿನಲ್ಲಿ ಎಷ್ಟು ಜನರಿದ್ದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇನ್ನೂ ಭೀಕರ ಅಪಘಾತದಲ್ಲಿ ಮುಳಬಾಗಲು ಮೂಲದ ಟ್ರಾಕ್ಟರ್ ಚಾಲಕ ಸುಬ್ರಮಣಿ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮುಳಬಾಗಲು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಕಾರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಶಾಸಕ ತಿಪ್ಪೇಸ್ವಾಮಿ ಸದ್ಯ ಆಂದ್ರಪ್ರದೇಶದ ವೈಎಸ್‌ಆರ್​ ಕಾಂಗ್ರೆಸ್‌ನ ಹಾಲಿ ಶಾಸಕರಾಗಿದ್ದಾರೆ. ಘಟನೆ ವೇಳೆ ಶಾಸಕರೂ ಕಾರಿನಲ್ಲಿದ್ದರು ಎಂದು ಹೇಳಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net