ಜುಲೈ 21ರಿಂದ ಆನೆಗುಂದಿ ಶ್ರೀ ಚಾತುರ್ಮಾಸ್ಯ : ಆಮಂತ್ರಣ ಪತ್ರಿಕೆ ಬಿಡುಗಡೆ

anegundi
ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಜಗದ್ಗುರು ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 20ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಆಮಂತ್ರಣ ಪತ್ರಿಕೆಯನ್ನು ಶ್ರೀಗಳು ಬಿಡುಗಡೆಗೊಳಿಸಿದರು
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಕಟಪಾಡಿ ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಜಗದ್ಗುರು ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ 20ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 21ರಿಂದ ಸೆಪ್ಟಂಬರ್ 18ರ ತನಕ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ನಡೆಯಲಿದೆ. ಚಾತುರ್ಮಾಸ್ಯ ಪೂರ್ವಭಾವಿ ಕ್ಷೇತ್ರ ಸಂದರ್ಶನ ಶುಕ್ರವಾರ ಪಡುಕುತ್ಯಾರು ಮಹಾಸಂಸ್ಥಾನದಲ್ಲಿ ಚಾತುರ್ಮಾಸ್ಯ ಆಮಂತ್ರಣ ಬಿಡುಗಡೆಗೊಳಿಸುವ ಮೂಲಕ ಆರಂಭಗೊಂಡಿತು.

ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರ ಹೋಬಳಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ.ಆಚಾರ್ ಕಂಬಾರು, ವಕೀಲ ಕೆ.ಪ್ರಭಾಕರ ಆಚಾರ್ಯ ಕೋಟೆಕಾರು, ಜಿ.ಟಿ.ಆಚಾರ್ಯ ಮುಂಬೈ, ಕಾಡಬೆಟ್ಟು ನಾಗರಾಜ ಆಚಾರ್ಯ, ಬಿ.ಸೂರ್ಯಕುಮಾರ್ ಹಳೆಯಂಗಡಿ, ದಿನೇಶ್ ಆಚಾರ್ಯ ಪಡುಬಿದ್ರಿ, ಕನ್ಯಾನ ಜನಾರ್ದನ ಆಚಾರ್ಯ, ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ದಯಾನಂದ ಆಚಾರ್ಯ ಕೆಳಾರ್ಕಳಬೆಟ್ಟು, ಯೋಗೀಶ್ ಆಚಾರ್ಯ ಕರಂಬಳ್ಳಿ, ಬಿ.ಯೋಗಿಶ್ ಆಚಾರ್ಯ ಕೊಯಂಬತ್ತೂರು, ಪುರುಷೋತ್ತಮ ಆಚಾರ್ಯ ಪುತ್ತೂರು, ವಿಶುಕುಮಾರ್ ಆಚಾರ್ಯ ಉಚ್ಚಿಲ, ಶುಭಾ ಪುರುಷೋತ್ತಮ ಪುತ್ತೂರು, ರಮಾ ನವೀನ್ ಕಾರ್ಕಳ, ಲೋಲಾಕ್ಷ ಶರ್ಮ ಪಡುಕುತ್ಯಾರು, ಸುಂದರ ಆಚಾರ್ಯ ಬೆಳುವಾಯಿ, ಮೋಹನ್ ಕುಮಾರ್ ಬೊಳ್ಳೂರು ಉಪಸ್ಥಿತರಿದ್ದರು.

ನಂತರ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠ ಹಳೆಯಂಗಡಿ ಹಾಗೂ ಪಡುಪಣಂಬೂರು, ಶ್ರೀ ನಾಲ್ಕೂರು ಪಂಜುರ್ಲಿ ದೈವಸ್ಥಾನವನ್ನು ಆನೆಗುಂದಿ ಶ್ರೀ ಸಂದರ್ಶಿಸಿದರು. ಜಗದ್ಗುರುಗಳ ಕ್ಷೇತ್ರ ಸಂದರ್ಶನ ಸಂಚಾಲಕ ಪಡುಕುತ್ಯಾರು ಐ.ಲೋಲಾಕ್ಷ ಶರ್ಮಾ-97406 63327 ಅವರಲ್ಲಿ ಯಾತ್ರೆ ಮಾಹಿತಿ ಪಡೆಯಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net