ಸಾರಿಗೆ ನೌಕರರ ಪ್ರತಿಭಟನೆ ನಡುವೆಯೇ ಹೃದಯಾಘಾತದಿಂದ ಪ್ರಯಾಣಿಕ ಸಾವು

Chinappa
Published on

ಬೆಂಗಳೂರು: ಸರ್ಕಾರಿ ಸಾರಿಗೆ ನೌಕರರ ಮುಷ್ಕರದ ನಡುವೆಯೇ ನಗರದ ಮೆಜಿಸ್ಟಿಕ್​ ಬಸ್​ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಜಿಗಣಿಯಿಂದ ಬೆಂಗಳೂರಿಗೆ ಬಂದಿದ್ದ ಚನ್ನಪ್ಪ (77) ಎಂಬುವವರು ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಹೃದಯಘಾತದಿಂದ ಸಾವಿಗೀಡಾಗಿದ್ದಾರೆ.‌ ಚನ್ನಪ್ಪ ಅವರು ಆನೇಕಲ್​ನ ಚಿಕ್ಕನಹಳ್ಳಿ ನಿವಾಸಿ.

6ನೇ ವೇತನ ಆಯೋಗ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಸಾರಿಗೆ ನೌಕರರು ಸಂಚಾರವನ್ನು ಬಂದ್​ ಮಾಡಿ ಧರಣಿ ಕುಳಿತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ತೀವ್ರ ತೊಂದೆಯಾಗಿದೆ. ಮುಷ್ಕರದ ಅರಿವಿಲ್ಲದೆ ಬಸ್​ ನಿಲ್ದಾಣಕ್ಕೆ ಆಗಮಿಸಿರುವ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಇನ್ನೊಂದೆಡೆ ಖಾಸಗಿ ಬಸ್​ಗಳಿಗೆ ಸರ್ಕಾರ ಅನುಮತಿ ನೀಡಿದ್ದು, ಇದನ್ನೇ ಬಂಡವಾಳವಾಗಿಸಿಕೊಂಡಿರುವ ಖಾಸಗಿ ಬಸ್​ ಮಾಲೀಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ಕೀಳುತ್ತಿರುವ ಆರೋಪಗಳು ಸಹ ಕೇಳಿಬರುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net