ರಾಜ್ಯ ಮತ್ತು ಪಕ್ಷಕ್ಕೆ ಇಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರವೂ, ಈ ಬಾರಿ ಸಚಿವ ಸಂಪುಟದಲ್ಲಿ ನನಗೆ ಅವಕಾಶ ನೀಡದಿರುವುದು ನನಗೆ ತೀವ್ರ ನಿರಾಶೆ ತಂದಿದೆ. ನನ್ನನ್ನು ಸಚಿವ ಸಂಪುಟದಿಂದ ಹೊರಗಿಡಲು ಯಾವುದೇ ಕಾರಣವನ್ನು ತಿಳಿಸದೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬುದು ಇನ್ನಷ್ಟು ಬೇಸರ ತಂದಿದೆ. ಆದಾಗ್ಯೂ, ನನ್ನ ಕ್ಷೇತ್ರದ ಜನರ ಸೇವೆ ಹಾಗೂ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನು ಇದೇ ಬದ್ಧತೆ, ಪ್ರಾಮಾಣಿಕತೆ ಮತ್ತು ನಿಷ್ಠೆಯೊಂದಿಗೆ ಮುಂದೆಯೂ ಕೆಲಸ ಮಾಡುತ್ತೇನೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.