

ವಿಜಯವಾಣಿ ಸುದ್ದಿಜಾಲ ಆನೇಕಲ್
ಪಟ್ಟಣದ ಶ್ರೀ ಕ್ಷೇತ್ರ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ಜಯಂತಿ ಹಾಗೂ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿತ್ತು.
ಈ ನಿಮಿತ್ತ ದೇವಾಲಯದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದ ರಾತ್ರಿವರೆಗೂ ವಿಶೇಷ ಪೂಜೆ, ಅರ್ಚನೆ, ಮಹಾಮಂಗಳಾರತಿ, ಪ್ರತ್ಯಂಗಿರಾ ಹೋಮ, ತೀರ್ಥ ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿತ್ತು.
ರಾತ್ರಿ ದೇವಾಲಯದಲ್ಲಿ ಆಯೋಜಿಸಿದ್ದ ಉತ್ಸವ ಹಾಗೂ ವಿಶೇಷವಾಗಿ ಮೆಣಸಿನ ಕಾಯಿ ಬಳಸಿ ನೆರವೇರಿಸಿದ ಪ್ರತ್ಯಂಗಿರಾ ಹೋಮದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.
ಮಳೆಯ ನಡುವೆಯೂ ಉತ್ಸವ: ಉತ್ಸವ ಮೂರ್ತಿಯ ಮೆರವಣಿಗೆ ಸಾಗುವ ಸಂದರ್ಭದಲ್ಲಿ ಮಳೆ ಆರಂಭಗೊಂಡಿತು. ಆದರೂ ನೂರಾರು ಭಕ್ತರು ಪಲ್ಲಕ್ಕಿ ಹೊತ್ತು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು.
ಬೆಳ್ಳಿ ಕವಚ: ಶ್ರೀ ಚೌಡೇಶ್ವರಿ ಜಯಂತಿ ಅಂಗವಾಗಿ ದೇವಾಲಯದಲ್ಲಿ ಅಮ್ಮನವರಿಗೆ ಬೆಳ್ಳಿಯ ಕವಚದಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದ ಸುತ್ತಮುತ್ತ ಹೂವಿನ ಅಲಂಕಾರ ಹಾಗೂ ವಿಶೇಷ ಪೂಜೆ ಪೂಲಕ ಭಕ್ತರ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಲಾಯಿತು ಎಂದು ದೇವಾಲಯದ ಅರ್ಚಕ ಕಾರ್ತಿಕೇಯನ್ ಭಟ್ ತಿಳಿಸಿದರು.
ಶಾಸಕ ಬಿ. ಶಿವಣ್ಣ ಪೂಜೆಯಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದರು.